ಬಂಟ್ವಾಳ, ಆಗಸ್ಟ್ 31, 2022 (ಕರಾವಳಿ ಟೈಮ್ಸ್) : ತಾಲೂಕಿನ ಮಣಿನಾಲ್ಕೂರು ಗ್ರಾಮದ ಪುಣ್ಕೆದಡಿ ನಿವಾಸಿ, ಮನೆಯಲ್ಲೇ ಕ್ಯಾಟರಿಂಗ್ ಉದ್ಯಮ ನಡೆಸುತ್ತಿದ್ದ ಲೋಕೇಶ್ ಪೂಜಾರಿ ಅವರ ಮನೆಗೆ ಮಂಗಳವಾರ ತಡ ರಾತ್ರಿ ಸಿಡಿಲು ಬಡಿದು ಮನೆ ಉಪಕರಣಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.
ಮನೆಯ ಸೊತ್ತುಗಳು, ವಿದ್ಯುತ್ ಉಪಕರಣಗಳು, ಪೀಠೋಪಕರಣಗಳು, ದಾಖಲೆ ಪತ್ರಗಳು, ನಗದು ಹಣ ಜೊತೆಗೆ ಕ್ಯಾಟರಿಂಗ್ ಉದ್ಯಮದ ಪಾತ್ರೆಗಳೆಲ್ಲವೂ ಘಟನೆಯಿಂದ ಸಂಪೂರ್ಣ ಸುಟ್ಟು ಭಸ್ಮವಾಗಿದ್ದು, ಮನೆಗೂ ಹಾನಿ ಸಂಭವಿಸಿದೆ. ಮನೆಮಂದಿ ಪಕ್ಕದ ಮನೆಯಲ್ಲಿ ಮಲಗಿದ್ದರಿಂದ ಪ್ರಾಣ ಹಾನಿ ತಪ್ಪಿ ಹೋಗಿದೆ.
ಘಟನಾ ಸ್ಥಳಕ್ಕೆ ಕಂದಾಯ ಇಲಾಖಾಧಿಕಾರಿ-ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನಷ್ಟದ ಅಂದಾಜು ನಡೆಸಿದ್ದಾರೆ.
0 comments:
Post a Comment