ಬಂಟ್ವಾಳ, ಸೆಪ್ಟೆಂಬರ್ 29, 2022 (ಕರಾವಳಿ ಟೈಮ್ಸ್) : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಂಟ್ವಾಳ ತಾಲೂಕಿನ ಪೊಳಲಿ ವಲಯದ ಕೊಡ್ಮಾಣ್ ಕಾರ್ಯಕ್ಷೇತ್ರದಲ್ಲಿ ನೂತನವಾಗಿ ರಚನೆಗೊಂಡ, ಅಮ್ಮ ಶ್ರೀ ಜ್ಞಾನ ವಿಕಾಸ ಕೇಂದ್ರವನ್ನು ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ಉದ್ಘಾಟಿಸಿದರು.
ಇದೇ ವೇಳೆ ಮಾತನಾಡಿದ ಅವರು, ಜ್ಞಾನವಿಕಾಸ ಕಾರ್ಯಕ್ರಮದ ಧ್ಯೇಯೋದ್ದೇಶ, ಅಮ್ಮನವರ ಆಶಯ, ಮಹಿಳಾ ಸಬಲೀಕರಣದ ಬಗ್ಗೆ, ಮಹಿಳೆಯರ ಆರೋಗ್ಯದ ಬಗ್ಗೆ ವಿವರಿಸಿದರು.
ಮೇರಮಜಲು ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಕರ್ಕೇರ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮೇರಮಜಲು ವಿದ್ಯಾ ಯುವಕ ಮಂಡಲ ಅಧ್ಯಕ್ಷ ಜಯರಾಮ್ ಶೆಟ್ಟಿ, ಭಾಗವಹಿಸಿದ್ದರು. ಯೋಜನೆಯ ಪೊಳಲಿ ವಲಯಾಧ್ಯಕ್ಷ ಜನಾರ್ದನ ಆಚಾರ್ಯ, ಒಕ್ಕೂಟದ ಅಧ್ಯಕ್ಷ ಉಮೇಶ್ ಆಳ್ವ, ಮೇಲ್ವಿಚಾರಕಿ ಹರಿಣಾಕ್ಷಿ, ತಾಲೂಕಿನ ಜ್ಞಾನವಿಕಾಸ ಸಮನ್ವಯಾಧಿಕಾರಿ ಸಪ್ನ, ಸೇವಾ ಪ್ರತಿನಿಧಿ ಶೈಲಜಾ ಮೊದಲಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
0 comments:
Post a Comment