ಬಂಟ್ವಾಳ, ಸೆಪ್ಟೆಂಬರ್ 29, 2022 (ಕರಾವಳಿ ಟೈಮ್ಸ್) : ರಾಷ್ಟ್ರೀಯ ಸೇವಾ ಯೋಜನೆಯ ಸ್ಥಾಪನಾ ದಿನವಾದ ಸೆಪ್ಟೆಂಬರ್ 24 ರಂದು ಬಿ.ಮೂಡ ಸರಕಾರಿ ಪದವಿಪೂರ್ವ ಕಾಲೇಜಿನ ಎನ್ ಎಸ್ ಎಸ್ ಘಟಕದ ವತಿಯಿಂದ ವಿಶೇಷ ಸ್ವಚ್ಚತಾ ಕಾರ್ಯಕ್ರಮ ಆಯೋಜಿಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿದ ಕಾಲೇಜು ಪ್ರಾಂಶುಪಾಲ ಯೂಸುಫ್ ವಿಟ್ಲ ಮಾತನಾಡಿ, ದೇಶದ ಯುವ ಪ್ರಜೆಗಳಾದ ವಿದ್ಯಾರ್ಥಿಗಳನ್ನು ದೇಶ ಕಟ್ಟುವ ಕಾಯಕದಲ್ಲಿ ತೊಡಗಿಸಿಕೊಳ್ಳಲು ಎನ್ ಎಸ್ ಎಸ್ ಉತ್ತಮವಾದ ವೇದಿಕೆಯಾಗಿದೆ ಎಂದು ಅಭಿಪ್ರಾಯಪಟ್ಟರು.
ಎನ್ನೆಸ್ಸಸ್ ಯೋಜನಾಧಿಕಾರಿ ಬಾಲಕೃಷ್ಣ ನಾಯ್ಕ್ ಸ್ವಾಗತಿಸಿ, ಉಪನ್ಯಾಸಕ ದಾಮೋದರ್ ವಂದಿಸಿದರು. ಅಬ್ದುಲ್ ರಝಾಕ್ ಅನಂತಾಡಿ ಕಾರ್ಯಕ್ರಮ ನಿರೂಪಿಸಿದರು.
ಬಳಿಕ ಬಿ ಸಿ ರೋಡು ಪರಿಸರದ ರೈಲ್ವೆ ನಿಲ್ದಾಣ, ಚಿಕ್ಕಯ್ಯಮಠ, ಗೂಡಿನಬಳಿ ಮೊದಲಾದ ಪ್ರದೇಶಗಳಲ್ಲಿ ಪ್ಲಾಸ್ಟಿಕ್, ಕಸ, ತ್ಯಾಜ್ಯಗಳನ್ನು ವಿಲೇವಾರಿ ಮಾಡಲಾಯಿತು. ವಿದ್ಯಾರ್ಥಿ ಪ್ರತಿನಿಧಿಗಳಾದ ಹೇಮಂತ್, ಮೊಹಮ್ಮದ್ ಅಲಿ, ಶರಣ್ಯ ಹಾಗೂ ಪೂಜಾ ಸ್ವಚ್ಚತಾ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.
0 comments:
Post a Comment