ಬಂಟ್ವಾಳ, ಸೆಪ್ಟೆಂಬರ್ 26, 2022 (ಕರಾವಳಿ ಟೈಮ್ಸ್) : ಬಿ ಸಿ ರೋಡಿನ ಬಂಟ್ವಾಳ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ ಇದರ 2021-22ನೇ ಸಾಲಿನ ವಾರ್ಷಿಕ ಮಹಾಸಭೆ ಹೋಟೆಲ್ ರಂಗೋಲಿ ಸಭಾಂಗಣದಲ್ಲಿ ಸೆ 24 ರಂದು ನಡೆಯಿತು.
ಸಭೆಯನ್ನು ಉದ್ಘಾಟಿಸಿದ ಸೊಸೈಟಿ ಅಧ್ಯಕ್ಷ, ಮಾಜಿ ಸಚಿವ ಬಿ ರಮಾನಾಥ ರೈ ಮಾತನಾಡಿ, ಗ್ರಾಮೀಣ ಜನರಿಗೆ ಆರ್ಥಿಕ ಸ್ವಾವಲಂಬನೆ ಜೊತೆಗೆ ಉದ್ಯೋಗ ಸೃಷ್ಟಿ ಹಿನ್ನೆಲೆಯಲ್ಲಿ ಆರಂಭಗೊಂಡ ಬಂಟ್ವಾಳ ಕ್ರೆಡಿಟ್ ಸೊಸೈಟಿ ಕಳೆದ ಸಾಲಿನಲ್ಲಿ 10,89,52,648 ಕೋಟಿ ರೂಪಾಯಿಗೂ ಮಿಕ್ಕಿ ವ್ಯವಹಾರ ನಡೆಸಿ ರೂಪಾಯಿ 6,62,475 ಲಕ್ಷ ರೂಪಾಯಿ ಲಾಭ ಗಳಿಸಿದೆ ಎಂದರಲ್ಲದೆ ಮುಂದಿನ ವರ್ಷ ಬಂಟ್ವಾಳ ಲೊರೆಟ್ಟೋ ಪದವಿನಲ್ಲಿ ನೂತನ ಶಾಖೆ ಆರಂಭಿಸಲಾಗುವುದು ಎಂದರು.
ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬೇಬಿ ಕುಂದರ್ ವಾರ್ಷಿಕ ವರದಿ ಮಂಡಿಸಿದರು. ಶಾಖಾಧಿಕಾರಿ ಕಾವ್ಯಶ್ರೀ ಲೆಕ್ಕಪತ್ರ ವಾಚಿಸಿದರು. ನಿರ್ದೇಶಕ ನಾರಾಯಣ್ ನಾಯ್ಕ್ ಮುಂಗಡ ಬಜೆಟ್ ಮಂಡಿಸಿದರು. ಉಪಾಧ್ಯಕ್ಷ ಮಾಯಿಲಪ್ಪ ಸಾಲಿಯಾನ್, ನಿರ್ದೇಶಕರಾದ ಚಂದ್ರಪ್ರಕಾಶ್ ಶೆಟ್ಟಿ, ಬಿ ಪದ್ಮಶೇಖರ್ ಜೈನ್, ಪಿಯೂಸ್ ಎಲ್ ರೊಡ್ರಿಗಸ್, ಬಿ ಎಂ ಅಬ್ಬಾಸ್ ಅಲಿ, ಮಂಜುಳಾ ಪೆರಾಜೆ, ಅಲ್ಫೋನ್ಸ್ ಮೆನೇಜಸ್, ಅಮ್ಮು ಅರ್ಬಿ ಗುಡ್ಡೆ, ಎಂ ಎಸ್ ಮುಹಮ್ಮದ್, ಸುದರ್ಶನ್ ಜೈನ್, ಸುಭಾಶ್ಚಂದ್ರ ಜೈನ್, ಸಿಬ್ಬಂದಿಗಳಾದ ಶೈಲೇಶ್ ಗೌಡ, ಮೆಲ್ವಿನ್ ಡಿ’ಸೋಜ, ರಂಜಿತಾ ನಾಯ್ಕ್ ಸಭೆಯಲ್ಲಿ ಭಾಗವಹಿಸಿದ್ದರು.
0 comments:
Post a Comment