ಬಂಟ್ವಾಳ, ಸೆಪ್ಟೆಂಬರ್ 07, 2022 (ಕರಾವಳಿ ಟೈಮ್ಸ್) : 2024ರ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ಮಾಸ್ಟರ್ ಸ್ಟ್ರೋಕ್’ ಯೋಜನೆ ಎಂದೇ ಬಿಂಬಿಸಲ್ಪಟ್ಟು ಬುಧವಾರದಿಂದ ತಮಿಳುನಾಡಿನ ಕನ್ಯಾಕುಮಾರಿಯಿಂದ ಆರಂಭಿಸಲಾಗಿರುವ ಕಾಂಗ್ರೆಸ್ ಪಕ್ಷದ ‘ಭಾರತ್ ಜೋಡೋ ಯಾತ್ರೆ’ ಕಾರ್ಯಕ್ರಮದ ಅಂಗವಾಗಿ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲೂ ಮಾಜಿ ಸಚಿವ ಬಿ ರಮಾನಾಥ ರೈ ಅವರ ನೇತೃತ್ವದ ಕಾಂಗ್ರೆಸ್ ನಿಯೋಗ ಬುಧವಾರ ಬಿ ಸಿ ರೋಡಿನ ಶ್ರೀ ರಕ್ತೇಶ್ವರಿ ದೇವಸ್ಥಾನ, ಮಿತ್ತಬೈಲು ದರ್ಗಾಶರೀಫ್ ಹಾಗೂ ಮೊಡಂಕಾಪು ಚರ್ಚ್ ಗಳಿಗೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿತು.
ಈ ಸಂದರ್ಭ ಪ್ರಮುಖರಾದ ಪಿಯೂಸ್ ಎಲ್ ರೋಡ್ರಿಗಸ್, ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಬಿ ಪದ್ಮಶೇಖರ್ ಜೈನ್, ಮುಹಮ್ಮದ್ ಶರೀಫ್ ಶಾಂತಿಅಂಗಡಿ, ಅಬೂಬಕ್ಕರ್ ಸಿದ್ದೀಕ್, ಮುಹಮ್ಮದ್ ನಂದರಬೆಟ್ಟು, ಲೋಲಾಕ್ಷ ಶೆಟ್ಟಿ, ಹಸೈನಾರ್ ಶಾಂತಿಅಂಗಡಿ, ಸುದರ್ಶನ್ ಜೈನ್, ಪದ್ಮನಾಭ ರೈ, ಎಂ ಎಸ್ ಮುಹಮ್ಮದ್, ಬಿ ಎಂ ಅಬ್ಬಾಸ್ ಅಲಿ, ಸದಾಶಿವ ಬಂಗೇರ, ಸುಭಾಶ್ಚಂದ್ರ ಶೆಟ್ಟಿ ಕುಳಾಲು, ಯೂಸುಫ್ ಕರಂದಾಡಿ, ಸುರೇಶ್ ಪೂಜಾರಿ ಜೋರಾ, ವೆಂಕಪ್ಪ ಪೂಜಾರಿ, ಜಿ ಎಂ ಇಬ್ರಾಹಿಂ, ಪಿ ಎ ರಹೀಂ, ಲೋಕೇಶ್ ಸುವರ್ಣ, ಗಂಗಾಧರ ಪೂಜಾರಿ, ಚಂದ್ರಶೇಖರ ಪೂಜಾರಿ, ಡೆಂಝಿಲ್ ನೊರೊನ್ಹಾ, ಜಯಂತಿ ಪೂಜಾರಿ, ಮಲ್ಲಿಕಾ ಶೆಟ್ಟಿ, ಫ್ಲೋಸಿ ಡಿ’ಸೋಜ, ಜೋಸ್ಪಿನ್ ಡಿ’ಸೋಜ, ಕರೀಂ ಬೊಳ್ಳಾಯಿ, ಸಿದ್ದೀಕ್ ಸರವು ಮೊದಲಾದವರು ಭಾಗವಹಿಸಿದ್ದರು.
0 comments:
Post a Comment