ಬೆಂಗಳೂರು, ಸೆಪ್ಟೆಂಬರ್ 08, 2022 (ಕರಾವಳಿ ಟೈಮ್ಸ್) : ಕಳೆದ ಆಗಸ್ಟ್ ತಿಂಗಳಲ್ಲಿ ನಡೆದ ದ್ವಿತೀಯ ಪಿಯುಸಿ ಪೂರಕ ಪರೀಕ್ಷಾ ಫಲಿತಾಂಶ ಸೆಪ್ಟೆಂಬರ್ 12ರಂದು ಪ್ರಕಟವಾಗಲಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರು ಸೆಪ್ಟೆಂಬರ್ 12 ರಂದು ಬೆಳಗ್ಗೆ 11 ಗಂಟೆ ನಂತರ ಇಲಾಖಾ ವೆಬ್‍ಸೈಟಿನಲ್ಲಿ ಫಲಿತಾಂಶ ಲಭ್ಯವಾಗಲಿದ್ದು, ಇಲಾಖೆ ವೆಬ್ ಸೈಟ್ karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದಿದ್ದಾರೆ.
ಕಳೆದ ಆಗಸ್ಟ್ 12 ರಿಂದ 25ರ ವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆದಿತ್ತು. ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ 1,85,270 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು.
0 comments:
Post a Comment