ಮಂಗಳೂರು, ಸೆಪ್ಟೆಂಬರ್ 07, 2022 (ಕರಾವಳಿ ಟೈಮ್ಸ್) : ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್.ಐ.ಎ. ಕರ್ನಾಟಕದ ಮೂರು ಜಿಲ್ಲೆಗಳ ಹಲವೆಡೆ ಶೋಧ ಕಾರ್ಯ ನಡೆಸುತ್ತಿದೆ.
ಮಂಗಳವಾರ ( ಸೆ 06) ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಎನ್.ಐ.ಎ. ಕರ್ನಾಟಕದ ಮೈಸೂರು, ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ 33 ಸ್ಥಳಗಳಲ್ಲಿ ಶೋಧ ನಡೆಸಿದೆ.
ಪ್ರಕರಣವು ಜುಲೈ 27 ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಠಾಣೆಯಲ್ಲಿ ದಾಖಲಾಗಿತ್ತು. ಕರ್ನಾಟಕ ಪೊಲೀಸ್ ಇಲಾಖೆ ನಡೆಸುತ್ತಿದ್ದ ಪ್ರಕರಣದ ತನಿಖೆಯನ್ನು ಆಗಸ್ಟ್ 4 ರಂದು NIA ತನಿಖೆಗೆ ನೀಡಲಾಗಿದೆ.
ಪ್ರಕರಣದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್‌ಐ) ಸಕ್ರಿಯ ಸದಸ್ಯರಾಗಿರುವ ಆರೋಪಿಗಳು ಸಮಾಜದ ಒಂದು ವರ್ಗದ ಸದಸ್ಯರಲ್ಲಿ ಭಯ ಉಂಟು ಮಾಡುವ ದೊಡ್ಡ ಪಿತೂರಿಯ ಭಾಗವಾಗಿ ಪ್ರವೀಣ್ ನೆಟ್ಟಾರು ಹತ್ಯೆಯನ್ನು ಯೋಜಿಸಿದ್ದಾರೆ ಮತ್ತು ಮಾಡಿದ್ದಾರೆ ಎಂದು ತನಿಖೆಗಳು ಬಹಿರಂಗಪಡಿಸಿವೆ ಎಂದು ಎನ್ ಐ ಎ ಅಧಿಕಾರಿಗಳು ತಿಳಿಸಿದ್ದಾರೆ.
ಆರೋಪಿಗಳು ಮತ್ತು ಶಂಕಿತರ ಆವರಣದಲ್ಲಿ ನಡೆಸಿದ ಶೋಧಗಳಲ್ಲಿ, ಡಿಜಿಟಲ್ ಸಾಧನಗಳು, ಬಳಸಿದ ಮದ್ದು ಗುಂಡುಗಳು, ಸುಧಾರಿತ ಶಸ್ತ್ರಾಸ್ತ್ರಗಳು, ನಗದು, ದೋಷಾರೋಪಣೆ ದಾಖಲೆಗಳು, ಕರ ಪತ್ರಗಳು ಮತ್ತು ಸಾಹಿತ್ಯ ಪುಸ್ತಕಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಪ್ರಕರಣದಲ್ಲಿ ಹೆಚ್ಚಿನ ತನಿಖೆಗಳು ಪ್ರಗತಿಯಲ್ಲಿವೆ ಎಂದು ಎನ್ ಐ ಎ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಜಿಲ್ಲಾ ಎಸ್ಪಿ ಮಂಗಳವಾರ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
0 comments:
Post a Comment