ಬಂಟ್ವಾಳ, ಸೆಪ್ಟೆಂಬರ್ 12, 2022 (ಕರಾವಳಿ ಟೈಮ್ಸ್) : ಕೆಪಿಸಿಸಿ ಉಪಾಧ್ಯಕ್ಷರು, ಮಾಜಿ ಸಚಿವರೂ ಆಗಿರುವ ಬಿ ರಮಾನಾಥ ರೈ ಅವರ ಹುಟ್ಟು ಹಬ್ಬದ ಪ್ರಯುಕ್ತ ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಹಾಗೂ ಅಲ್ಪಸಂಖ್ಯಾತ ಘಟಕದ ವತಿಯಿಂದ ಸೆಪ್ಟೆಂಬರ್ 14 ರಂದು ಬಿ ಸಿ ರೋಡಿನ ರಂಗೋಲಿ ಸಭಾಂಗಣದಲ್ಲಿ ನಡೆಯಲಿರುವ “ರಕ್ತದಾನ ಶಿಬಿರ”ದ ಪೆÇೀಸ್ಟರ್ ಬಿಡುಗಡೆ ಕಾರ್ಯಕ್ರಮ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.
ಈ ಸಂದರ್ಭ ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಝ್ ಬಡಕಬೈಲು, ಅಲ್ಪಸಂಖ್ಯಾತ ಕಾಂಗ್ರೆಸ್ ಘಟಕಾಧ್ಯಕ್ಷ ಅರ್ಷದ್ ಸರವು ಸಹಿತ ಬ್ಲಾಕ್ ಹಾಗೂ ವಲಯ ಯುವ ಕಾಂಗ್ರೆಸ್ ಪದಾಧಿಕಾರಿಗಳು ಉಪಸ್ಥಿತರಿದ್ದರು.
0 comments:
Post a Comment