ಬಂಟ್ವಾಳ, ಸೆಪ್ಟೆಂಬರ್ 12, 2022 (ಕರಾವಳಿ ಟೈಮ್ಸ್) : ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿಗಳ ವತಿಯಿಂದ ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಬಿ ರಮಾನಾಥ ರೈ ಅವರ 71ನೇ ಹುಟ್ಟುಹಬ್ಬ ಪ್ರಯುಕ್ತ
ಮಂಗಳವಾರ (ಸೆ 13) ರಂದು ಮಂಗಳವಾರ ಬೆಳಗ್ಗೆ 9.30ಕ್ಕೆ ಸರಿಯಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಯ ಬಡ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಬ್ಲಾಕ್ ಅಧ್ಯಕ್ಷರುಗಳಾದ ಬೇಬಿ ಕುಂದರ್ ಹಾಗೂ ಸುದೀಪ್ ಕುಮಾರ್ ಶೆಟ್ಟಿ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
0 comments:
Post a Comment