ಬಂಟ್ವಾಳ, ಅಕ್ಟೋಬರ್ 15, 2022 (ಕರಾವಳಿ ಟೈಮ್ಸ್) : ಶಾಲಾ ಕಾಲೇಜುಗಳ ರಾಷ್ಟ್ರೀಯ ಸೇವಾ ಯೋಜನಾ ಚಟುವಟಿಕೆಗಳು ಹಾಗೂ ವಾರ್ಷಿಕ ವಿಶೇಷ ಶಿಬಿರವು ವಿದ್ಯಾರ್ಥಿಗಳ ಪರಿಪೂರ್ಣ ವ್ಯಕ್ತಿತ್ವ ನಿರ್ಮಾಣಕ್ಕೆ ಅತ್ಯುತ್ತಮ ಬುನಾದಿಯಾಗಿದೆ ಎಂದು ಬಿ ಮೂಡ ಸರಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಯೂಸುಫ್ ವಿಟ್ಲ ಹೇಳಿದರು.
ಬರಿಮಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಬಿ ಮೂಡ ಸರಕಾರಿ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ರಜನಿ ಚಿಕ್ಕಯ್ಯಮಠ, ಸದಸ್ಯೆ ಸುಷ್ಮಾ ಚರಣ್, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಅಶ್ವಥ್, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಸಲೀಂ ಬರಿಮಾರು, ಉದ್ಯಮಿ ಗಂಗಾಧರ ಶೇರಾ, ನಿವೃತ್ತ ಪೊಲೀಸ್ ಅಧಿಕಾರಿ ಕಿಟ್ಟು ಮೂಲ್ಯ, ಪತ್ರಕರ್ತ ಹರೀಶ್ ಮಾಂಬಾಡಿ, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷೆ ಶಶಿಪ್ರಭಾ, ಮುಖ್ಯ ಶಿಕ್ಷಕಿ ಕಲ್ಯಾಣಿ ಭಾಗವಹಿಸಿದ್ದರು.
ಇದೇ ವೇಳೆ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಶಿಬಿರಕ್ಕೆ ಸಹಕರಿಸಿದ ಶಿಕ್ಷಕರು ಹಾಗೂ ಶಿಬಿರಾಧಿಕಾರಿಗಳನ್ನು ಅಭಿನಂದಿಸಲಾಯಿತು. ಶಿಬಿರಾರ್ಥಿಗಳಾದ ಧನುಷ್, ಹೇಮಂತ್, ಸಂಧ್ಯಾ ಮತ್ತು ಶೋಭಾ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಉಪನ್ಯಾಸಕ ದಾಮೋದರ ಇ ಸ್ವಾಗತಿಸಿ, ಶಿಬಿರದ ವರದಿ ಮಂಡಿಸಿದರು. ಶಿಬಿರಾಧಿಕಾರಿ ಬಾಲಕೃಷ್ಣ ನಾಯ್ಕ್ ಕೆ ವಂದಿಸಿದರು. ಉಪನ್ಯಾಸಕ ಅಬ್ದುಲ್ ರಝಾಕ್ ಕಾರ್ಯಕ್ರಮ ನಿರೂಪಿಸಿದರು.
0 comments:
Post a Comment