ಮಂಗಳೂರು, ಅಕ್ಟೋಬರ್ 13, 2022 (ಕರಾವಳಿ ಟೈಮ್ಸ್) : ಮಂಗಳೂರು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಆವರಣದಲ್ಲಿ ಸುಮಾರು 31 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ಬಯಲು ರಂಗ ಮಂದಿರ ಲೋಕಾರ್ಪಣಾ ಕಾರ್ಯಕ್ರಮ ಅಕ್ಟೋಬರ್ 14 ರಂದು ಶುಕ್ರವಾರ (ನಾಳೆ) ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.
ಸಂಸದ ನಳಿನ್ ಕುಮಾರ್ ಕಟೀಲ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಕಾರ್ಯಕ್ರಮದಲ್ಲಿ ಅಭಿನಂದನಾ ಭಾಷಣ ಮಾಡಲಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಜಯಾನಂದ ಅಂಚನ್ ಅಕಾಡೆಮಿ ಪ್ರಕಟಿತ ಪುಸ್ತಕ “ಸೀಕ್ ಸಂಕಡ ಇಲ್ಲ ಪಾತೆರ ಬೈದೆರೆನ ಕೆಬಿ ಪಾತೆರ” ಮತ್ತು ಮದೆಪ್ಪೆರಾವಂದಿ ತುಳುವೆರ್ ಮಾಲಿಕೆಯ ಪುಸ್ತಕ “ಆಟದಾರ್ ಪುಳಿಂಚೆದಾರ್ ರಾಮಯ್ಯ ಶೆಟ್ರ್” ಪುಸ್ತಕಗಳನ್ನು ಬಿಡುಗಡೆಗೊಳಿಸಲಿದ್ದಾರೆ.
ಇದೇ ವೇಳೆ ಸಾಹಿತಿ ಹಾಗೂ ಸಂಶೋಧಕ ಡಾ ಸದಾನಂದ ಪೆರ್ಲ ಅವರಿಗೆ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಎಂ ಸಿ ಎಫ್ ಪ್ರಾಯೋಜಕತ್ವದ ದಾಖಲೀಕರಣ ಯೋಜನೆಯನ್ನು ಅನುಷ್ಠಾನಗೊಳಿಸಿದ ನಮ್ಮ ಕುಡ್ಲ ಚಾನೆಲ್, ನಮ್ಮ ಟಿ ವಿ ಚಾನೆಲ್, ವಿ4 ಚಾನೆಲ್, ಚಾನೆಲ್ 9 ಮತ್ತು ದೈಜಿ ವಲ್ರ್ಡ್ ಚಾನೆಲ್‍ಗಳ ಮುಖ್ಯಸ್ಥರಿಗೆ ಸನ್ಮಾನ ನಡೆಯಲಿದೆ.
ಮನಪಾ ಉಪ ಮೇಯರ್ ಪೂರ್ಣಿಮಾ, ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ಕಾರ್ಪೊರೇಟರ್ ಗಣೇಶ್ ಕುಲಾಲ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಅಕಾಡೆಮಿ ಅಧ್ಯಕ್ಷ ದಯಾನಂದ ಜಿ ಕತ್ತಲ್‍ಸಾರ್ ಉಪಸ್ಥಿತರಿರುವರು ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಕವಿತ ಹಾಗೂ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರದೀಪ್ ಡಿ’ಸೋಜ ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
0 comments:
Post a Comment