ಬಂಟ್ವಾಳ, ಅಕ್ಟೋಬರ್ 26, 2022 (ಕರಾವಳಿ ಟೈಮ್ಸ್) : ಬಂಟ್ವಾಳ ಮಹಿಳಾ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ ರಮಾನಾಥ ರೈ ಅವರ ನೇತೃತ್ವದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋ ಪೂಜೆ ಕಾರ್ಯಕ್ರಮವು ಬಡಗ ಕಾಜೆಕಾರ್ ಗ್ರಾಮದ ಸುಧಾಕರ್ ಶಣೈ ಖಂಡಿಗ ಅವರ ಮನೆಯಲ್ಲಿ ಬುಧವಾರ (ಅ 26) ನಡೆಯಿತು.
ಈ ಸಂದರ್ಭ ಕೆಪಿಸಿಸಿ ಸದಸ್ಯರಾದ ಪಿಯೂಸ್ ಎಲ್ ರೊಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಉಪಾಧ್ಯಕ್ಷ ಸುಧಾಕರ್ ಶಣೈ, ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲವೀನಾ ವಿಲ್ಮಾ ಮೊರಾಸ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಪ್ರಮುಖರಾದ ಮಾಯಿಲಪ್ಪ ಸಾಲ್ಯಾನ್, ಶ್ರೀಮತಿ ಸುಕನ್ಯಾ ಶೆಣೈ, ಅಬ್ದುಲ್ಲಾ, ಪದ್ಮನಾಭ ಸಾವಂತ್ ವಾಮದಪದವು ಮೊದಲಾದವರು ಭಾಗವಹಿಸಿದ್ದರು.
0 comments:
Post a Comment