ಬಂಟ್ವಾಳ, ಅಕ್ಟೋಬರ್ 25, 2022 (ಕರಾವಳಿ ಟೈಮ್ಸ್) : ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ, ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಸಜಿಪಮೂಡ ಗ್ರಾಮದ ಕಂದೂರು ಬಜಾರ್ ಅಡಿಟೋರಿಯಂನಲ್ಲಿ ಸೋಮವಾರ ಮನುಕುಲದ ಮಾದರಿ ಪ್ರವಾದಿ (ಸ ಅ) ಅವರ ಜನ್ಮದಿನಚರಣೆಯ ಪ್ರಯುಕ್ತ ಆಯೋಜಿಸಲಾದ ಜಶ್ನೆ ಮುಬಾರಕ್ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಬಿ ರಮಾನಾಥ ರೈ ಭೇಟಿ ನೀಡಿ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಸಜಿಪಮೂಡ ಹಾಗೂ ಸಜಿಪಮುನ್ನೂರು ವಲಯ ವ್ಯಾಪ್ತಿಯ ಮದ್ರಸ ವಿದ್ಯಾರ್ಥಿಗಳಿಗಾಗಿ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಹಲವು ಕಾಂಗ್ರೆಸ್ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
0 comments:
Post a Comment