ಮಹಾರಾಷ್ಟ್ರದಲ್ಲಿ ಹೊಸ ತಳಿಯ ಸೋಂಕು ಪತ್ತೆಯ ಬಳಿಕ ರಾಜ್ಯದಲ್ಲಿ ಹೆಚ್ಚಿದ ಆತಂಕ : ಆರೋಗ್ಯ ಇಲಾಖೆಯಿಂದ ಕಟ್ಟೆಚ್ಚರ ಘೋಷಣೆ, ಕೋವಿಡ್ ನಿಯಮ ಪಾಲಿಸುವಂತೆ ಸೂಚನೆ - Karavali Times ಮಹಾರಾಷ್ಟ್ರದಲ್ಲಿ ಹೊಸ ತಳಿಯ ಸೋಂಕು ಪತ್ತೆಯ ಬಳಿಕ ರಾಜ್ಯದಲ್ಲಿ ಹೆಚ್ಚಿದ ಆತಂಕ : ಆರೋಗ್ಯ ಇಲಾಖೆಯಿಂದ ಕಟ್ಟೆಚ್ಚರ ಘೋಷಣೆ, ಕೋವಿಡ್ ನಿಯಮ ಪಾಲಿಸುವಂತೆ ಸೂಚನೆ - Karavali Times

728x90

26 October 2022

ಮಹಾರಾಷ್ಟ್ರದಲ್ಲಿ ಹೊಸ ತಳಿಯ ಸೋಂಕು ಪತ್ತೆಯ ಬಳಿಕ ರಾಜ್ಯದಲ್ಲಿ ಹೆಚ್ಚಿದ ಆತಂಕ : ಆರೋಗ್ಯ ಇಲಾಖೆಯಿಂದ ಕಟ್ಟೆಚ್ಚರ ಘೋಷಣೆ, ಕೋವಿಡ್ ನಿಯಮ ಪಾಲಿಸುವಂತೆ ಸೂಚನೆ

 ಬೆಂಗಳೂರು, ಅಕ್ಟೋಬರ್ 27, 2022 (ಕರಾವಳಿ ಟೈಮ್ಸ್) : ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್ಸಿನ ಓಮಿಕ್ರಾನ್ ತಳಿಯ ಹೊಸ ರೂಪಾಂತರಿ ಬಿಕ್ಯೂ 1 ಪತ್ತೆಯಾದ ಬಳಿಕ ರಾಜ್ಯದಲ್ಲೂ ಆತಂಕ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ  ರಾಜ್ಯ ಆರೋಗ್ಯ ಇಲಾಖೆ ಕಟ್ಟೆಚ್ಚರ ಘೋಷಿಸಿದ್ದು, ಶೀತ, ಕೆಮ್ಮು ಪರೀಕ್ಷೆ ಮಾಡಿಸಿಕೊಂಡು ಐಸೋಲೇಷನ್ ನಲ್ಲಿರುವಂತೆ  ಸಲಹೆ ನೀಡಿದೆ. 

ಹೊಸ ತಳಿ ಪತ್ತೆಯಾಗಿರುವುದರಿಂದ ಕೊರೋನಾ ನಿಯಮಗಳನ್ನು ಕಡ್ಡಾಯವಾಗಿ ಅನುಸರಿಸುವಂತೆ, ಗುಂಪು ಸೇರಿವಿಕೆಯಿಂದ ದೂರ ಇರುವುದು ಹಾಗೂ ಮೂರನೇ ಡೋಸ್ ಲಸಿಕೆ ಪಡೆಯುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಾರ್ವಜನಿಕರಿಗೆ ಸಲಹೆ ನೀಡಿದೆ. 

ಜ್ವರ, ಕೆಮ್ಮು, ನೆಗಡಿ, ಗಂಟಲು ಕೆರೆತ ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗಳು ಬಹಳಷ್ಟು ಎಚ್ಚರ ವಹಿಸಬೇಕಿದ್ದು, ಲಕ್ಷಣಗಳು ಕಂಡು ಬಂದ ತಕ್ಷಣ ಹತ್ತಿರದ ಆಸ್ಪತ್ರೆ, ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಪರೀಕ್ಷೆ ನಡೆಸಿ ಫಲಿತಾಂಶ ದೊರೆಯುವವರೆಗೂ ಸ್ವಂಯ ಪ್ರತ್ಯೇಕ ವಾಸ ಇರಬೇಕು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವವರು ಕೂಡಲೇ ಹತ್ತಿರದ ಆಸ್ಪತ್ರೆಯಲ್ಲಿ ವೈದ್ಯಕೀಯ ಆರೈಕೆ ಪಡೆದುಕೊಳ್ಳಬೇಕೆಂದು ತಿಳಿಸಿದೆ. 

ಹವಾ ನಿಯಂತ್ರಣ ವ್ಯವಸ್ಥೆ ಇರುವ ಒಳಾಂಗಣ, ಅಗತ್ಯ ಗಾಳಿ-ಬೆಳಕಿಲ್ಲದಿರುವ ಸ್ಥಳಗಳು, ಹೆಚ್ಚಿನ ಜನಸಂದಣಿ ಇರುವ ಪ್ರದೇಶಗಳು ಹಾಗೂ ಆರೋಗ್ಯ ಸಂಸ್ಥೆಗಳಲ್ಲಿ ಮಾಸ್ಕ್ ಧರಿಸಬೇಕು. ಹಬ್ಬಗಳನ್ನು ಸಾಧ್ಯವಾದಷ್ಟು ಹೊರಾಂಗಣಗಳಲ್ಲಿ ಆಚರಿಸಬೇಕು. ಜನ ದಟ್ಟಣೆಯ ಪ್ರದೇಶಗಳಿಂದ ದೂರವಿರಬೇಕು ಎಂದು ಆರೋಗ್ಯ ಇಲಾಖೆ ಜನತೆಗೆ ಮನವಿ ಮಾಡಿಕೊಂಡಿದೆ. 

ಮುನ್ನೆಚ್ಚರಿಕೆ ಲಸಿಕೆ ಡೋಸ್ ಪಡೆಯಲು ಬಾಕಿ ಇರುವವರು ಕೂಡಲೇ ಪಡೆದುಕೊಳ್ಳಬೇಕು. 60 ವರ್ಷ ಮೇಲ್ಪಟ್ಟವರು ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಶೀಘ್ರವೇ ಲಸಿಕೆಯನ್ನು ಪಡೆಯಬೇಕು. ಜೀವ ನಿರೋಧಕ ಕಡಿಮೆ ಇರುವವರು, ಡಯಾಲಿಸಿಸಿ ಮಾಡಿಸಿಕೊಳ್ಳುವವರು ಮತ್ತು ಕ್ಯಾನ್ಸರ್ ನಿರೋಧಕ ಔಷಧಿಗಳನ್ನು ಸೇವಿಸುತ್ತಿರುವವರು ತಮಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರೊಂದಿಗೆ ಸಮಾಲೋಚನೆ ನಂತರ ಆದ್ಯತೆಯ ಮೇಲೆ ಕೋವಿಡ್-19 ಲಸಿಕೆಯನ್ನು ಪಡೆದುಕೊಳ್ಳಬೇಕೆಂದು ಇಲಾಖೆ ಸೂಚಿಸಿದೆ. 

ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ಚಾಚೂ ತಪ್ಪದೆ ಪಾಲಿಸಬೇಕು. ಮಡಚಿದ ಮೊಣಕೈ ಒಳಗೆ ಕೆಮ್ಮುವುದು ಹಾಗೂ ಸೀನುವುದು. ಕರವಸ್ತ್ರ/ ಟಿಶ್ಯೂ ಪೇಪರ್'ನ ಬಳಕೆ, ಸಾರ್ವಜನಿಕ ಸ್ಥಳಗಳಲ್ಲಿ ಮೂಗನ್ನು ಶುಚಿಗೊಳಿಸದಿರುವುದು ಹಾಗೂ ಉಗುಳದಿರುವುದು. ಕೈಗಳನ್ನು ಸೋಪ್ ನಿಂದ ತೊಳೆಯುವುದು ಹಾಗೂ ಸೋಂಕಿನ ಲಕ್ಷಣಗಳನ್ನು ಹೊಂದಿದವರ ಸಂಪರ್ಕದಿಂದ ದೂರವಿರುವ ಕ್ರಮಗಳನ್ನು ಪಾಲಿಸಬೇಕೆಂದು ಆರೋಗ್ಯ ಇಲಾಖೆ ರಾಜ್ಯದ ಜನತೆಗೆ ಮನವಿ ಮಾಡಿಕೊಂಡಿದೆ.

  • Blogger Comments
  • Facebook Comments

0 comments:

Post a Comment

Item Reviewed: ಮಹಾರಾಷ್ಟ್ರದಲ್ಲಿ ಹೊಸ ತಳಿಯ ಸೋಂಕು ಪತ್ತೆಯ ಬಳಿಕ ರಾಜ್ಯದಲ್ಲಿ ಹೆಚ್ಚಿದ ಆತಂಕ : ಆರೋಗ್ಯ ಇಲಾಖೆಯಿಂದ ಕಟ್ಟೆಚ್ಚರ ಘೋಷಣೆ, ಕೋವಿಡ್ ನಿಯಮ ಪಾಲಿಸುವಂತೆ ಸೂಚನೆ Rating: 5 Reviewed By: karavali Times
Scroll to Top