ಬಂಟ್ವಾಳ, ಅಕ್ಟೋಬರ್ 18, 2022 (ಕರಾವಳಿ ಟೈಮ್ಸ್) : ಪೂಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಲಾರಿ ಹಾಗೂ ಪಿಕಪ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಪಿಕಪ್ ಚಾಲಕ ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.
ಮೃತ ಚಾಲಕನನ್ನು ಬಂಟ್ವಾಳ ತಾಲೂಕಿನ ಪಾಂಡವರಕಲ್ಲು ನಿವಾಸಿ ಸಹಲ್ (19) ಎಂದು ಗುರುತಿಸಲಾಗಿದೆ. ಈತನ ಜೊತೆಯಲ್ಲಿದ್ದ ಸ್ನೇಹಿತ ಅವಿನಾಶ್ (19), ಲಾರಿ ಚಾಲಕ ಧನರಾಜ್ (22) ಗಂಭೀರ ಗಾಯಗೊಂಡಿದ್ದು, ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪಿಕಪ್ ಚಾಲಕ ಸಹಲ್ ಅವರನ್ನು ತಕ್ಷಣ ಸ್ಥಳೀಯರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಅದ ಅವರು ಸಂಜೆ ವೇಳೆಗೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮಂಗಳೂರಿನಿಂದ ಧರ್ಮಸ್ಥಳ ಕಡೆಗೆ ಚಲಿಸುತ್ತಿದ್ದ ಲಾರಿಯು, ಪುಂಜಾಲಕಟ್ಟೆಯಿಂದ ವಗ್ಗ ಕಡೆಗೆ ಬರುತ್ತಿದ್ದ ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆದು ಈ ಭೀಕರ ಅವಘಡ ಸಂಭವಿಸಿದೆ. ಅಪಘಾತದ ತೀವ್ರತೆಗೆ ಪಿಕಪ್ ಸಂಪೂರ್ಣ ಜಖಂಗೊಂಡಿದೆ.
0 comments:
Post a Comment