ಬಂಟ್ವಾಳ, ನವೆಂಬರ್ 01, 2022 (ಕರಾವಳಿ ಟೈಮ್ಸ್) : ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ನಿವೃತ್ತ ವಿಸ್ತರಣಾಧಿಕಾರಿ ಷಣ್ಮುಖ ಶಿವಣ್ಣ ಅವರು ಅಲ್ಪ ಕಾಲದ ಅನಾರೋಗ್ಯದಿಂದ ಸೋಮವಾರ (ಅ 31) ನಿಧನರಾಗಿದ್ದಾರೆ.
ಮೂಲತಃ ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಿವಾಸಿಯಾಗಿರುವ ಇವರು ಬಿ ಸಿ ರೋಡು ಸಮೀಪದ ಕೈಕುಂಜೆಯಲ್ಲಿ ವಾಸವಾಗಿದ್ದರು. ಹಿಂದುಳಿದ ವರ್ಗಗಳ ಇಲಾಖೆಯಲ್ಲಿ 40 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಇವರು ನಿವೃತ್ತಿ ನಂತರ ವಾಮದಪದವು ವಿದ್ಯಾರ್ಥಿ ನಿಲಯದಲ್ಲಿ ವಾರ್ಡನ್ ಆಗಿಯೂ ಸೇವೆ ಸಲ್ಲಿಸಿದ್ದರು. ಪತ್ನಿ ದಾಕ್ಷಾಯಿಣಿ ಕಂದಾಯ ಇಲಾಖೆಯಲ್ಲಿ ನೌಕರರಾಗಿದ್ದಾರೆ. ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅವರು ಅಗಲಿದ್ದಾರೆ.
0 comments:
Post a Comment