ಮಂಗಳೂರು, ನವೆಂಬರ್ 20, 2022 (ಕರಾವಳಿ ಟೈಮ್ಸ್) : ನಗರದ ಕಂಕನಾಡಿ ಠಾಣಾ ವ್ಯಾಪ್ತಿಯ ನಾಗುರಿಯಲ್ಲಿ ಶನಿವಾರ ಸಂಜೆ ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ಹಠಾತ್ ಉಂಟಾದ ಸ್ಪೋಟ ಘಟನೆಯಲ್ಲಿ ಚಾಲಕ ಸಹಿತ ಇಬ್ಬರು ಗಾಯಗೊಂಡಿದ್ದು, ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ತನಿಖೆ ನಡೆಯುತ್ತಿದೆ. ಸಾರ್ವಜನಿಕರು ಆತಂಕಪಡುವ ಅಗತ್ಯ ಇಲ್ಲ ಎಂದು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.
ಅಟೋ ರಿಕ್ಷಾಕ್ಕೆ ಹತ್ತಿದ ಪ್ರಯಾಣಿಕನ ಕೈಯಲ್ಲಿದ್ದ ಪರಿಕರವೊಂದು ಸ್ಪೋಟಗೊಂಡು ಘಟನೆ ನಡೆದಿದೆ ಎಂದು ಹೇಳಲಾಗುತ್ತಿದ್ದು, ಯಾವುದೇ ಸ್ಪಷ್ಟತೆ ದೊರೆತಿಲ್ಲ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು, ವಿಧಿವಿಜ್ಞಾನ ತಂಡ ಆಗಮಿಸಿ ಪರಿಶೀಲನೆ ನಡೆಸಿದೆ. ಈ ಬಗ್ಗೆ ಪ್ರತಿಕ್ರಯಿಸಿದ ನಗರ ಪೆÇಲೀಸ್ ಕಮಿಷನರ್ ಎನ್. ಶಶಿಕುಮಾರ್, ನಾಗುರಿಯಿಂದ ಪಂಪ್ ವೆಲ್ ಕಡೆ ತೆರಳುತ್ತಿದ್ದ ಆಟೋದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಾಗುರಿಯಿಂದ ಹತ್ತಿದ ಪ್ರಯಾಣಿಕನ ಕೈಯಲ್ಲಿದ್ದ ಪ್ಲ್ಯಾಸ್ಟಿಕ್ ಬ್ಯಾಗಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ತಗುಲಿದ ಪರಿಣಾಮ ಅಟೋ ಒಳಭಾಗ ಸುಟ್ಟು ಹೋಗಿದೆ. ಬೆಂಕಿ ಕಾಣಿಸಿಕೊಂಡಿದೆ ಎಂದು ಅಟೋ ಚಾಲಕ ಹೇಳುತ್ತಿದ್ದು, ಬ್ಲಾಸ್ಟ್ ಆದ ಬಗ್ಗೆ ಪ್ರತ್ಯಕ್ಷದರ್ಶಿಗಳು ಯಾವುದೇ ಹೇಳಿಕೆ ನೀಡಿಲ್ಲ. ಈ ಬಗ್ಗೆ ಸಮಗ್ರವಾದ ವಿಚಾರಣೆ ನಡೆಸಲಾಗುತ್ತದೆ ಎಂದಿದ್ದಾರೆ.
0 comments:
Post a Comment