ಬಂಟ್ವಾಳ, ನವೆಂಬರ್ 02, 2022 (ಕರಾವಳಿ ಟೈಮ್ಸ್) : ತಾಲೂಕಿನ ಮೆಲ್ಕಾರ್ ಸಮೀಪದ ಬೋಳಂಗಡಿ ನರಹರಿ ಪರ್ವತ ಬಳಿ ಬುಧವಾರ ರಾತ್ರಿ ಟಿಪ್ಪರ್ ಲಾರಿ ರೋಗಿಯನ್ನು ಕರೆದೊಯ್ಯುತ್ತಿದ್ದ ಅಂಬ್ಯುಲೆನ್ಸ್ ವಾಹನಕ್ಕೆ ಡಿಕ್ಕಿಯಾಗಿದೆ. ಅದೃಷ್ಟವಶಾತ್ ಘಟನೆಯಿಂದ ಯಾವುದೇ ಅಪಾಯ ಸಂಭವಿಸಿಲ್ಲ. ಅಂಬ್ಯುಲೆನ್ಸ ವಾಹನದಲ್ಲಿದ್ದ ರೋಗಿಯನ್ನು ಇನ್ನೊಂದು ವಾಹನದಲ್ಲಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ.
ಸುಳ್ಯ ಕೆ ವಿ ಜಿ ಆಸ್ಪತ್ರೆಯ ಆಂಬ್ಯುಲೆನ್ಸ್ ಇದಾಗಿದ್ದು, ರೋಗಿಯನ್ನು ಮಂಗಳೂರಿಗೆ ಕರೆದೊಯ್ಯುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಘಟನೆಯಿಂದ ಅಂಬ್ಯುಲೆನ್ಸ್ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಬಂಟ್ವಾಳ ಸಂಚಾರಿ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
0 comments:
Post a Comment