ನಾಗುರಿ ರಿಕ್ಷಾದಲ್ಲಿ ಕುಕ್ಕರ್ ಸ್ಫೋಟ ಪ್ರಕರಣ : ಆರೋಪಿ ಶಾರೀಕ್ ಎಂಬುದನ್ನು ಕುಟುಂಬಸ್ಥರು ಗುರುತು ಪತ್ತೆ ಹಚ್ಚಿದ್ದಾರೆ : ಎಡಿಜಿಪಿ ಅಲೋಕ್ ಕುಮಾರ್ - Karavali Times ನಾಗುರಿ ರಿಕ್ಷಾದಲ್ಲಿ ಕುಕ್ಕರ್ ಸ್ಫೋಟ ಪ್ರಕರಣ : ಆರೋಪಿ ಶಾರೀಕ್ ಎಂಬುದನ್ನು ಕುಟುಂಬಸ್ಥರು ಗುರುತು ಪತ್ತೆ ಹಚ್ಚಿದ್ದಾರೆ : ಎಡಿಜಿಪಿ ಅಲೋಕ್ ಕುಮಾರ್ - Karavali Times

728x90

21 November 2022

ನಾಗುರಿ ರಿಕ್ಷಾದಲ್ಲಿ ಕುಕ್ಕರ್ ಸ್ಫೋಟ ಪ್ರಕರಣ : ಆರೋಪಿ ಶಾರೀಕ್ ಎಂಬುದನ್ನು ಕುಟುಂಬಸ್ಥರು ಗುರುತು ಪತ್ತೆ ಹಚ್ಚಿದ್ದಾರೆ : ಎಡಿಜಿಪಿ ಅಲೋಕ್ ಕುಮಾರ್

ಮಂಗಳೂರು, ನವೆಂಬರ್ 22, 2022 (ಕರಾವಳಿ ಟೈಮ್ಸ್) : ನಗರದ ಕಂಕನಾಡಿ ಠಾಣಾ ವ್ಯಾಪ್ತಿಯ ನಾಗುರಿಯಲ್ಲಿ ಶನಿವಾರ ಸಂಜೆ ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ಹಠಾತ್ ಉಂಟಾದ ಸ್ಪೋಟ ಪ್ರಕರಣದಲ್ಲಿ ಗಾಯಗೊಂಡಿದ್ದ ವ್ಯಕ್ತಿ ತೀರ್ಥಹಳ್ಳಿಯ ಶಾರೀಕ್ ಎಂಬುದನ್ನು ಗುರುತು ಪತ್ತೆ ಹಚ್ಚಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಅವರು ಸೋಮವಾರ ತಿಳಿಸಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಿಂದ ಪೆÇಲೀಸರು ಕರೆಸಿಕೊಂಡಿದ್ದ ಶಾರೀಕ್ ಸಂಬಂಧಿಕರಾದ ಮಲತಾಯಿ ಶಬಾನಾ, ಸೋದರಿ ಆತಿಯಾ, ತಾಯಿಯ ತಂಗಿ ಯಾಸ್ಮಿನ್ ಅವರು ಈತನೇ ಶಾರಿಕ್ ಎನ್ನುವುದನ್ನು ಒಪ್ಪಿಕೊಂಡಿದ್ದಾರೆ ಎಂದು ಹೇಳಿದ್ದಾರೆ. ಅಲ್ಲದೆ, ಪೆÇಲೀಸರ ದಾಳಿ ವೇಳೆ ಶಾರೀಕ್ ಉಳಿದುಕೊಂಡಿದ್ದ ಮನೆಯಲ್ಲಿಯೂ ಸ್ಫೋಟಕ ವಸ್ತುಗಳು ಪತ್ತೆಯಾಗಿವೆ ಎಂದು ಹೇಳಿದ್ದಾರೆ.



ನವೆಂಬರ್ 19 ರಂದು ಸಂಜೆ 4.40 ರ ವೇಳೆಗೆ ಮಂಗಳೂರಿನಲ್ಲಿ ಈ ಸ್ಫೋಟ ಘಟನೆ ಸಂಭವಿಸಿದೆ. ಘಟನೆಯಲ್ಲಿ ಪ್ರಯಾಣಿಕ, ಆಟೋ ಚಾಲಕನಿಗೆ ಗಾಯಗಳಾಗಿತ್ತು. ತಕ್ಷಣ ಇಲ್ಲಿನ ಪೆÇಲೀಸ್ ಅಧಿಕಾರಿಗಳಿಂದ ಗುರುತು ಪತ್ತೆ ಮಾಡುವ ಕೆಲಸ ಆರಂಭವಾಗಿದ್ದು, ಆರೋಪಿ ಬಳಿ ಪ್ರೇಮರಾಜ್ ಎಂಬ ಹೆಸರಿನ ಐಡಿ ಸಿಕ್ಕಿದೆ. ನಾನೇ ಪ್ರೇಮರಾಜ್ ಎಂಬಾತನ ಜೊತೆ ಮಾತನಾಡಿದ್ದೇನೆ. ತಕ್ಷಣ ಪೆÇಲೀಸರಿಗೆ ತಿಳಿಸಲು ಪ್ರೇಮರಾಜ್ ಗೆ ಹೇಳಿದ್ದೆ. ಶಾರೀಕ್ ಸಂಬಂಧಿಕರು ಬಂದು ಗುರುತು ಪತ್ತೆ ಹಚ್ಚಿದ್ದಾರೆ. ಈತ ಮೋಹನ್ ಕುಮಾರ್ ಎಂಬವರ ಮನೆಯಲ್ಲಿ ವಾಸವಿದ್ದ. ಶಂಕಿತ ವಾಸವಿದ್ದ ಮನೆಯಲ್ಲಿ ಹಲವು ಸ್ಫೋಟಕ ವಸ್ತುಗಳು ಸಿಕ್ಕಿವೆ. ಈ ಆರೋಪಿಯು ಮೈಸೂರಿನಿಂದ ಮಂಗಳೂರಿಗೆ ಬಂದಿದ್ದಾನೆ. ಮತ್ತೊಂದು ನಕಲಿ ಗುರುತಿನ ಚೀಟಿ ಪಡೆದು ಕೊಯಮತ್ತೂರಲ್ಲೂ ವಾಸವಿದ್ದ ಎಂದು ಹೇಳಿದ್ದಾರೆ. 

ಈತನಿಗೆ ಆರ್ಥಿಕ ನೆರವು ನೀಡುತ್ತಿದ್ದವರ ಪತ್ತೆಗಾಗಿ ವಿಶೇಷ ತಂಡ ರಚನೆ ಮಾಡಲಾಗಿದೆ. ಆರೋಪಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಶಾರೀಕ್ ಆಗಸ್ಟ್ 15, 2022 ರ ಶಿವಮೊಗ್ಗ ಗಲಾಟೆ ಬಳಿಕ ಎಚ್ಚೆತ್ತುಕೊಂಡಿದ್ದ. ಅಗಸ್ಟ್ 23ರ ಬಳಿಕ ಅಲ್ಲಿಂದ ಪರಾರಿಯಾಗಿದ್ದ. ಕೊಯಮತ್ತೂರು, ತಮಿಳುನಾಡು, ಕೇರಳ ಮೊದಲಾದೆಡೆ ಸುತ್ತಾಡಿ ಬಳಿಕ ಮೈಸೂರಿಗೆ ಬಂದಿದ್ದ. ಅಲ್ಲಿ ರೂಂ ಮಾಡಿ ಮೊಬೈಲ್ ತಯಾರಿ ಇನ್ಸ್ಟಿಟ್ಯೂಟ್ ನಲ್ಲಿ ಕೆಲಸ ಮಾಡುತ್ತಿದ್ದ. ನಮಗೆ ಮತ್ತೆ ಅವನ ಫೆÇೀಟೋ ನೋಡಿ ಶಾರೀಕ್ ಅಂತ ಗೊತ್ತಾಗಿತ್ತು. ಆದರೂ ಅವನ ಸಂಬಂಧಿಕರನ್ನು ಕರೆಸಿ ಗುರುತು ಪತ್ತೆ ಮಾಡಿದ್ದೇವೆ. ಅವನ ಮಲ ತಾಯಿ ಶಬನಾ, ಸಹೋದರಿ ಆಫಿಯಾ, ತಾಯಿಯ ತಂಗಿ ಯಾಸ್ಮೀನ್ ಅವನ ಗುರುತು ಪತ್ತೆ ಮಾಡಿದ್ದಾರೆಂದು ಅಲೋಕ್ ಕುಮಾರ್ ತಿಳಿಸಿದ್ದಾರೆ.

2020ರಲ್ಲಿ ಮಂಗಳೂರಿನಲ್ಲಿ ಗೋಡೆ ಬರಹ ಪ್ರಕರಣ ದಾಖಲಾಗಿತ್ತು. ಅದರಲ್ಲಿ ಅವನ ಮೇಲೆ ಯುಎಪಿಎ ಆಕ್ಟ್ ನಡಿ ಕೇಸ್ ಆಗಿದೆ. ಎ1 ಆರೋಪಿ ಶಾರೀಕ್ ಆಗಿದ್ದ, ಆಗಲೇ ಮನೆಯವರು ಬುದ್ದಿ ಹೇಳಿದ್ದರಂತೆ. ಶಿವಮೊಗ್ಗದಲ್ಲಿ ಜಬೀವುಲ್ಲ ಕೇಸ್ ವಿಚಾರಣೆ ವೇಳೆ ಇವರ ಮಾಹಿತಿ ಗೊತ್ತಾಗಿತ್ತು. ಮುನೀರ್ ಬಂಧನ ಬಳಿಕ ಶಾರೀಕ್ ಟ್ರಾಯಲ್ ಬ್ಲಾಸ್ಟ್ ಮಾಡಿದ್ದು ಗೊತ್ತಾಗಿದೆ. ಆದರೆ, ಇದ್ಯಾವ ವಿಚಾರವೂ ಮೈಸೂರು ಮನೆ ಮಾಲೀಕ ಮೋಹನಗೆ ಗೊತ್ತಿಲ್ಲ. ಮೊನ್ನೆ ಮೈಸೂರಿನಿಂದ ಮಡಿಕೇರಿ ಮಾರ್ಗವಾಗಿ ಬಸ್ ನಲ್ಲಿ ಮಂಗಳೂರು ಬಂದಿದ್ದಾನೆ. ಅಲ್ಲಿ ನಾಗುರಿ ಬಳಿ ಇಳಿದು ಅವನ ಟಾರ್ಗೆಟ್ ಜಾಗಕ್ಕೆ ಹೋಗುತ್ತಿದ್ದ. ಆದರೆ, ಅವನು ಎಲ್ಲಿಗೆ ಹೋಗುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿಲ್ಲ. ಆರೋಪಿ ಗುಣಮುಖವಾದ ಬಳಿಕ ಈ ವಿಚಾರ ತಿಳಿದು ಬರಲಿದೆ. ವಾರದ ಹಿಂದೆ ಒಮ್ಮೆ ಮಂಗಳೂರಿಗೆ ಬಂದು ಸುತ್ತಾಡಿ ಹೋಗಿದ್ದಾನೆ. ಮೈಸೂರಿನಿಂದ ಇಬ್ಬರು ಹಾಗೂ ಮಂಗಳೂರಿನ ಒಬ್ಬರನ್ನು ಪ್ರಕರಣ ಸಂಬಂಧ ವಶಕ್ಕೆ ಪಡೆಯಲಾಗಿದೆ ಎಂದು ಅಲೋಕ್ ಕುಮಾರ್ ಮಾಹಿತಿ ನೀಡಿದ್ದಾರೆ.

ತೀರ್ಥಹಳ್ಳಿಯ ಅಬ್ದುಲ್ ಮತೀನ್ ತಾಹಾ ಇದರ ಮೈನ್ ಹ್ಯಾಂಡ್ಲರ್ ಆಗಿದ್ದಾನೆ. ಅವನು ತಲೆಮರೆಸಿಕೊಂಡಿದ್ದು, ಎನ್‍ಐಎ ಎರಡು ಲಕ್ಷ ರಿವಾರ್ಡ್ ಘೋಷಣೆ ಮಾಡಿದೆ. ಈಗ ಒಂದು ದೊಡ್ಡ ಅನಾಹುತ ತಪ್ಪಿದೆ ಅನ್ನೋ ನೆಮ್ಮದಿ ಇದೆ. ಬಾಂಬ್ ಬ್ಲಾಸ್ಟ್ ಆಗಿದ್ದರೆ ಉದ್ವಿಗ್ನ ವಾತಾವರಣ ಸೃಷ್ಟಿಯಾಗ್ತಾ ಇತ್ತು. ಆದರೆ, ಆ ವಿಚಾರದಲ್ಲಿ ದೇವರಿಗೆ ಧನ್ಯವಾದ ಸಲ್ಲಿಸಲೇಬೇಕು. ಸದ್ಯ ಅವನಿಗೆ ಚಿಕಿತ್ಸೆ ಮುಂದುವರೆದಿದೆ, ಅವನು ಗುಣಮುಖನಾದ ಬಳಿಕ ವಿಚಾರಣೆ ನಡೆಸುತ್ತೇವೆ. ಚಾಲಕ ಪುರುಷೋತ್ತಮ್ ಪೂಜಾರಿಗೆ ಸರಕಾರದ ವತಿಯಿಂದ ಪರಿಹಾರ ಕೊಡಿಸುವ ಪ್ರಯತ್ನ ಮಾಡುತ್ತೇವೆ. ಅವರ ಸಂಬಂಧಿಕರ ಸಮಸ್ಯೆಗೂ ನಾವು ಸ್ಪಂದನೆ ಕೊಡುತ್ತೇವೆ. ಮಂಗಳೂರು ಮತ್ತು ಮೈಸೂರು ಪೆÇಲೀಸ್ ಆಯುಕ್ತರ ತನಿಖೆ ಮುಂದುವರೆಯುತ್ತಿದೆ ಎಂದವರು ಹೇಳಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ನಾಗುರಿ ರಿಕ್ಷಾದಲ್ಲಿ ಕುಕ್ಕರ್ ಸ್ಫೋಟ ಪ್ರಕರಣ : ಆರೋಪಿ ಶಾರೀಕ್ ಎಂಬುದನ್ನು ಕುಟುಂಬಸ್ಥರು ಗುರುತು ಪತ್ತೆ ಹಚ್ಚಿದ್ದಾರೆ : ಎಡಿಜಿಪಿ ಅಲೋಕ್ ಕುಮಾರ್ Rating: 5 Reviewed By: karavali Times
Scroll to Top