ಬಂಟ್ವಾಳ, ಡಿಸೆಂಬರ್ 14, 2022 (ಕರಾವಳಿ ಟೈಮ್ಸ್) : ತಾಲೂಕಿನ ಅರಳ ಗ್ರಾಮದಲ್ಲಿ ಬಂಟ್ವಾಳ ತಾಲೂಕು ತಹಶೀಲ್ದಾರ್ ನೇತೃತ್ವದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಡಿಸೆಂಬರ್ 22 ರಂದು ಗುರುವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಅರಳ ಗ್ರಾಮದ ಎರ್ಮಾಳ್ ಪದವು ಅರಳ ಗ್ರಾಮ ಪಂಚಾಯತ್ ಕಚೇರಿ ಕಟ್ಟಡದಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ಎಲ್ಲಾ ಇಲಾಖಾಧಿಕಾರಿಗಳು ಉಪಸ್ಥಿತರಿರಲಿದ್ದು, ಕಂದಾಯ ಇಲಾಖೆ ಸಹಿತ ವಿವಿಧ ಇಲಾಖೆಗಳ ಸವಲತ್ತುಗಳ ವಿತರಣೆ ಹಾಗೂ ಇಲಾಖಾ ಸಮಸ್ಯೆಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಮಾಲೋಚಿಸುವ ಅವಕಾಶ ಗ್ರಾಮಸ್ಥರಿಗೆ ದೊರೆಯಲಿದೆ.
ಅರಳ ಗ್ರಾಮದ ಸಾರ್ವಜನಿಕರ ಯಾವುದೇ ಅಹವಾಲುಗಳಿದ್ದಲ್ಲಿ ಡಿಸೆಂಬರ್ 21ರೊಳಗೆ ಗ್ರಾ ಪಂ ದೂರು ಪೆಟ್ಟಿಗೆ, ಗ್ರಾಮ ಲೆಕ್ಕಿಗರು ಅಥವಾ ತಾಲೂಕು ಕಚೇರಿಗೆ ಖುದ್ದಾಗಿ ಸಲ್ಲಿಸಬಹುದು. ಸಾರ್ವಜನಿಕರು ಕಾರ್ಯಕ್ರಮದ ಸದುಪಯೋಗಪಡೆದುಕೊಳ್ಳುವಂತೆ ತಾಲೂಕು ತಹಶೀಲ್ದಾರ್ ಕಚೇರಿ ಪ್ರಕಟಣೆ ತಿಳಿಸಿದೆ.
0 comments:
Post a Comment