ನವದೆಹಲಿ, ಡಿಸೆಂಬರ್ 30, 2022 (ಕರಾವಳಿ ಟೈಮ್ಸ್) : ಟೀಂ ಇಂಡಿಯಾ ವಿಕೆಟ್ ಕೀಪ್ ಕಂ ಬ್ಯಾಟ್ಸ್‍ಮೆನ್ ರಿಷಭ್ ಪಂತ್ ಅವರು ಸಂಚರಿಸುತ್ತಿದ್ದ ಕಾರು ರಸ್ತೆ ಡಿವೈಡರಿಗೆ ಡಿಕ್ಕಿ ಹೊಡೆದ ನಡೆದ ಭೀಕರ ಅಪಘಾತದಲ್ಲಿ ರಿಷಬ್ ಪಂಥ್ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಶುಕ್ರವಾರ ನಡೆದಿದೆ.
ದೆಹಲಿ ಹಾಗೂ ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿಯಲ್ಲಿನ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ಹೊತ್ತಿ ಉರಿದಿದೆ. ರಿಷಭ್ ಪಂತ್ ಅವರ ತಲೆ ಹಾಗೂ ಕಾಲುಗಳಿಗೆ ಗಾಯವಾಗಿದೆ. ರಿಷಭ್ ಪಂತ್ ಅವರು ದೆಹಲಿಯಿಂದ ಉತ್ತರಾಖಂಡಕ್ಕೆ ಮರಳುತ್ತಿದ್ದ ವೇಳೆ ಹಮ್ಮಾದ್‍ಪುರ್ ಝಾಲ್ ಸಮೀಪ ಈ ಅವಘಡ ಸಂಭವಿಸಿದೆ. ಪಂಥ್ ಚಲಾಯಿಸುತ್ತಿದ್ದ ಮರ್ಸಿಡಿಸ್ ಕಾರು ವೇಗವಾಗಿದ್ದ ಕಾರಣ ನಿಯಂತ್ರಣ ಕಳೆದುಕೊಂಡು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದ್ದು, ಇದರ ಪರಿಣಾಮ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡಿದೆ ಎಂದು ವರದಿಯಾಗಿದೆ.
ರಿಷಭ್ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಅವರ ಪ್ಲಾಸ್ಟಿಕ್ ಸರ್ಜರಿ ಮಾಡಲಾಗುವುದು. ವೈದ್ಯರ ಪ್ರಕಾರ, ರಿಷಬ್ ಪಂತ್ ಅವರ ಹಣೆ ಮತ್ತು ಕಾಲಿಗೆ ಗಾಯಗಳಾಗಿವೆ. ಸದ್ಯ ರಿಷಬ್ ಪರಿಸ್ಥಿತಿ ಸ್ಥಿರವಾಗಿದ್ದು, ಅವರನ್ನು ರೂರ್ಕಿಯಿಂದ ದೆಹಲಿಗೆ ಕಳುಹಿಸಲಾಗುತ್ತಿದೆ ಎಂದು ಸಕ್ಷಮ್ ಆಸ್ಪತ್ರೆಯ ಅಧ್ಯಕ್ಷ ಡಾ ಸುಶೀಲ್ ನಗರ್ ತಿಳಿಸಿದ್ದಾರೆ.
0 comments:
Post a Comment