ಬಂಟ್ವಾಳ : ಕುವೆಂಪು ಜನ್ಮದಿನ ಪ್ರಯುಕ್ತ ವಿಶ್ವ ಮಾನವ ದಿನಾಚರಣೆ - Karavali Times ಬಂಟ್ವಾಳ : ಕುವೆಂಪು ಜನ್ಮದಿನ ಪ್ರಯುಕ್ತ ವಿಶ್ವ ಮಾನವ ದಿನಾಚರಣೆ - Karavali Times

728x90

29 December 2022

ಬಂಟ್ವಾಳ : ಕುವೆಂಪು ಜನ್ಮದಿನ ಪ್ರಯುಕ್ತ ವಿಶ್ವ ಮಾನವ ದಿನಾಚರಣೆ

ಬಂಟ್ವಾಳ, ಡಿಸೆಂಬರ್ 28, 2022 (ಕರಾವಳಿ ಟೈಮ್ಸ್) : ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ವಿಶ್ವ ಮಾನವ ರಾಷ್ಟ್ರಕವಿ ಕುವೆಂಪು ಜನ್ಮ ದಿನವನ್ನು ವಿಶ್ವ ಮಾನವ ದಿನಾಚರಣೆಯಾಗಿ ಬಂಟ್ವಾಳ ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ಗುರುವಾರ (ಡಿ 29) ಆಚರಿಸಲಾಯಿತು. 



ಕಾರ್ಯಕ್ರಮ ಉದ್ಘಾಟಿಸಿದ ತಾಲೂಕು ಕಚೇರಿ ಕೇಂದ್ರ ಸ್ಥಾನೀಯ ಶಿರಸ್ತೇದಾರ್ ನರೇಂದ್ರನಾಥ್ ಮಿತ್ತೂರು ಮಾತನಾಡಿ, ವಿಶ್ವ ಮಾನವತಾವಾದಿ ಕುವೆಂಪು ಅವರ ನಿಲುವುಗಳು ಎಲ್ಲಾ ಕಾಲಕ್ಕೂ ಪ್ರಸ್ತುತ. ಕನ್ನಡಕ್ಕೆ ಜ್ಞಾನಪೀಠ ಪ್ರಶಸ್ತಿಯ ಗರಿಯನ್ನು ತಂದುಕೊಟ್ಟ ಕುವೆಂಪು ಅವರ ಜನ್ಮ ದಿನವನ್ನು ವಿಶ್ವ ಮಾನವ ದಿನಾಚರಣೆಯಾಗಿ ಆಚರಿಸುವುದು ನಮ್ಮ ನಾಡಿಗೆ ಹೆಮ್ಮೆ ಎಂದು ಕೊಂಡಾಡಿದರು. 



ಈ ಸಂದರ್ಭ ಉಪತಹಸೀಲ್ದಾರ್ ರಾಜೇಶ್ ನಾಯ್ಕ್ , ತಾಲೂಕು ಕಚೇರಿ ಸಿಬ್ಬಂದಿಗಳು, ಗ್ರಾಮ ಆಡಳಿತ ಆಧಿಕಾರಿಗಳು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್ ಸ್ವಾಗತಿಸಿ, ವಂದಿಸಿದರು.

  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ : ಕುವೆಂಪು ಜನ್ಮದಿನ ಪ್ರಯುಕ್ತ ವಿಶ್ವ ಮಾನವ ದಿನಾಚರಣೆ Rating: 5 Reviewed By: karavali Times
Scroll to Top