ಬಂಟ್ವಾಳ, ಡಿಸೆಂಬರ್ 05, 2022 (ಕರಾವಳಿ ಟೈಮ್ಸ್) : ಗೇಮರ್ಸ್ ಸ್ಪೋಟ್ರ್ಸ್ ಕ್ಲಬ್ ಬೋಗೋಡಿ-ಮೆಲ್ಕಾರ್ ಇದರ ವತಿಯಿಂದ ಪಾಣೆಮಂಗಳೂರು ವಾಲಿಬಾಲ್ ಲೀಗ್ (ಪಿವಿಎಲ್-2022) ಸೀಸನ್-5 ಸ್ಥಳೀಯ 5 ತಂಡಗಳ ಲೀಗ್ ಮಾದರಿಯ ವಾಲಿಬಾಲ್ ಪಂದ್ಯಾಟವು ಡಿಸೆಂಬರ್ 10 ರಂದು ಬೋಗೋಡಿ ಸರಕಾರಿ ಶಾಲಾ ಮೈದಾನದಲ್ಲಿ ನಡೆಯಲಿದೆ.
ಬಂಟ್ವಾಳ ಪುರಸಭಾಧ್ಯಕ್ಷ ಮುಹಮ್ಮದ್ ಶರೀಫ್ ಶಾಂತಿಅಂಗಡಿ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಸ್ಥಳೀಯ ಕೌನ್ಸಿಲರ್ ಅಬೂಬಕ್ಕರ್ ಸಿದ್ದೀಕ್ ಗುಡ್ಡೆಅಂಗಡಿ ಪಂದ್ಯಾಕೂಟವನ್ನು ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ, ಇರಾ ಗ್ರಾ ಪಂ ಸದಸ್ಯ ಅಬ್ದುಲ್ ರಝಾಕ್ ಕುಕ್ಕಾಜೆ ಸಹಿತ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ ಎಂದು ಸ್ಪೋಟ್ಸ್ ಕ್ಲಬ್ ಪ್ರಕಟಣೆ ತಿಳಿಸಿದೆ.
0 comments:
Post a Comment