ಮಂಗಳೂರು, ಫೆಬ್ರವರಿ 01, 2023 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಋಷಿಕೇಶ್ ಸೊನಾವಾಣೆ ಭಗವಾನ್ ಅವರನ್ನು ವರ್ಗಾಯಿಸಿ ಮಂಗಳವಾರ ಸರಕಾರ ಆದೇಶಿಸಿದ್ದು, ತೆರವಾದ ಅವರ ಸ್ಥಾನಕ್ಕೆ ನೂತನ ಎಸ್ಪಿಯಾಗಿ ಅಮಾಟೆ ವಿಕ್ರಮ್ ಅವರನ್ನು ನಿಯೋಜಿಸಲಾಗಿದೆ.
ರಾಜ್ಯದಲ್ಲಿ ನಾಲ್ವರು ಎಸ್ಪಿ ದರ್ಜೆಯ ಐಪಿಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಎಸ್ಪಿ ಋಷಿಕೇಷ್ ಸೋನವಾಣೆ ಭಗವಾನ್ ಅವರನ್ನು ಗುಪ್ತಚರ ವಿಭಾಗದ ಎಸ್ಪಿಯಾಗಿ ವರ್ಗಾಯಿಸಲಾಗಿದ್ದು, ಅವರ ಸ್ಥಾನಕ್ಕೆ ಗುಪ್ತಚರ ವಿಭಾಗದಲ್ಲಿದ್ದ 2021ರ ಬ್ಯಾಚಿನ ಐಪಿಎಸ್ ಅಧಿಕಾರಿ ಅಮಾಟೆ ವಿಕ್ರಮ್ ಅವರನ್ನು ನಿಯೋಜನೆ ಮಾಡಲಾಗಿದೆ.
2015ರ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಋಷಿಕೇಶ್ ಸೋನವಾಣೆ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯಾದ ಬಳಿಕ ಜಿಲ್ಲೆಯಲ್ಲಿ ಜನಸ್ನೇಹಿ ಪೊಲೀಸ್ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.
ಇದೇ ವೇಳೆ, ಬೀದರ್ ಜಿಲ್ಲಾ ಎಸ್ಪಿಯಾಗಿದ್ದ ಡೆಕ್ಕ ಕಿಶೋರ್ ಬಾಬು ಅವರನ್ನು ವೈರ್ ಲೆಸ್ ವಿಭಾಗದ ಎಸ್ಪಿಯಾಗಿ ವರ್ಗ ಮಾಡಲಾಗಿದೆ. ಹುಬ್ಬಳ್ಳಿ ಹೆಸ್ಕಾಂ ಎಸ್ಪಿ ಆಗಿದ್ದ ಚೆನ್ನಬಸವಣ್ಣ ಲಂಗೋಟಿ ಅವರನ್ನು ಬೀದರ್ ಜಿಲ್ಲೆಯ ಎಸ್ಪಿಯಾಗಿ ಮಾಡಲಾಗಿದೆ.
0 comments:
Post a Comment