ಕಡಬ, ಜನವರಿ 09, 2023 (ಕರಾವಳಿ ಟೈಮ್ಸ್) : ಸುಬ್ರಹ್ಮಣ್ಯ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವಕನನ್ನು ದುಷ್ಕರ್ಮಿಗಳು ಅರೆ ಬೆತ್ತಲೆಗೊಳಿಸಿ ಗಂಭೀರ ಹಾಗೂ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ. ರಾಧಾಕೃಷ್ಣ (45) ಹಾಗೂ ವಿಶ್ವಾಸ್ ಎನ್ (19) ಎಂಬವರೇ ಬಂಧಿತ ಆರೋಪಿಗಳು.
ಸುಳ್ಯ ತಾಲೂಕು, ಸಂಪಾಜೆ ಗ್ರಾಮದ ಕಲ್ಲುಗುಂಡಿ ನಿವಾಸಿ ಹನೀಫ್ ಅವರ ಪುತ್ರ ಅಫೀದ್ (20) ಎಂಬಾತ ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ ಪರಿಚಿತಳಾದ ವಿದ್ಯಾರ್ಥಿನಿಯನ್ನು ಜ 5 ರಂದು ಭೇಟಿಯಾಗಿ ಮಾತನಾಡಿದ ಕಾರಣಕ್ಕೆ ಸುಮಾರು 10-12 ಮಂದಿ ದುಷ್ಕರ್ಮಿಗಳು ಕಾನೂನು ಕೈಗೆತ್ತಿಕೊಂಡು ಯುವಕನಿಗೆ ಮಾರಣಾಂತಿಕ ಹಲ್ಲೆ ನಡೆಸಿ, ಜೀವ ಬೆದರಿಕೆ ಒಡ್ಡಿ ಪರಾರಿಯಾಗಿದ್ದರು.
ಘಟನೆಗೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ಪೆÇಲೀಸ್ ಠಾಣಾ ಅಪರಾಧ ಕ್ರಮಾಂಕ 02/2023 ಕಲಂ 323, 324, 307, 365, 143, 147 ಜೊತೆಗೆ 149 ಐಪಿಸಿಯಂತೆ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ಉಳಿದ ಆರೋಪಿಗಳಿಗೆ ಬಲೆ ಬೀಸಿದ್ದಾರೆ.
ಈ ಮಧ್ಯೆ ಹಲ್ಲೆಗೊಳಗಾದ ಯುವಕ ಅಫೀದನ ವಿರುದ್ದವೂ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರತಿ ದೂರು ದಾಖಲಾಗಿದ್ದು, ಅಫೀದ್ ಮಾತನಾಡಿದ ಹುಡುಗಿ ಅಪ್ರಾಪ್ತೆಯಾಗಿದ್ದು, ಆಕೆಯ ತಂದೆ ಈ ಬಗ್ಗೆ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಬಗ್ಗೆ ಸುಬ್ರಹ್ಮಣ್ಯ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 03/2023 ಕಲಂ 354(ಬಿ), 506 ಐಪಿಸಿ, ಕಲಂ 12 ಪೆÇಕ್ಸೋ ಕಾಯ್ದೆಯಂತೆ ಪ್ರಕರಣ ದಾಖಲಾಗಿದೆ.
0 comments:
Post a Comment