ಬಂಟ್ವಾಳ, ಜನವರಿ 16, 2023 (ಕರಾವಳಿ ಟೈಮ್ಸ್) : ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಅವರ ವಿಕಾಸ ಯಾತ್ರೆಯಲ್ಲಿ ಭಾಗವಹಿಸಲು ಬಂದಿದ್ದ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಸೋಮವಾರ ಬೆಳಿಗ್ಗೆ ಪಾಣೆಮಂಗಳೂರು ಸಮೀಪದ ಬೋಳಂಗಡಿ-ನರಹರಿ ಪವರ್ತ ಬಳಿ ಸಂಭವಿಸಿದೆ.
ಈ ಬಗ್ಗೆ ನರಿಕೊಂಬು ಗ್ರಾಮದ ಮಾಣಿಮಜಲು ನಿವಾಸಿ ಸುರೇಶ್ ಕೋಟ್ಯಾನ್ ಅವರು ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ನಾನು ಸೋಮವಾರ ಮೋಟಾರ್ ಸೈಕಲಿನಲ್ಲಿ ಮನೆಯಿಂದ ಕಲ್ಲಡ್ಕ ಕಡೆಗೆ ಹೋಗುತ್ತಿದ್ದ ವೇಳೆ ಬೆಳಿಗ್ಗೆ ಸುಮಾರು 7:40 ರ ಸಮಯ ಬಂಟ್ವಾಳ ತಾಲೂಕು ಪಾಣೆಮಂಗಳೂರು ಗ್ರಾಮದ ನರಹರಿ ಪರ್ವತ ಹತ್ತಿರ ತಲುಪಿದಾಗ ಮುಂದಿನಿಂದ ಚಲಾಯಿಸಿಕೊಂಡು ಹೋಗುತ್ತಿದ್ದ ಟಿಎಸ್-08 ಯುಜೆ-6666 ನೋಂದಣಿ ಸಂಖ್ಯೆಯ ಪಿಕಪ್ ಚಾಲಕ ತಿರುವು ರಸ್ತೆಯಲ್ಲಿ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ಕಲ್ಲಡ್ಕ ಕಡೆಯಿಂದ ಮೆಲ್ಕಾರ್ ಕಡೆಗೆ ಸವಾರಿ ಮಾಡಿಕೊಂಡು ಬರುತ್ತಿದ್ದ ಕೆಎ-19 -ಇಎಸ್-9853ನೇ ಮೋಟಾರ್ ಸೈಕಲಿಗೆ ಡಿಕ್ಕಿ ಹೊಡೆದು ಅಪಘಾತವಾಗಿದೆ. ಪರಿಣಾಮ ಮೋಟಾರ್ ಸೈಕಲ್ ಸವಾರ ಬೆಳ್ತಂಗಡಿ ತಾಲೂಕು ನಿವಾಸಿ ವಿಜಿತ್ ಎಂಬವರು ಮೋಟಾರ್ ಸೈಕಲ್ ಸಮೇತ ಎಸೆಯಲ್ಪಟ್ಟು ರಸ್ತೆಗೆ ಬಿದ್ದು ಹಿಂಬದಿ ತಲೆಗೆ ಗುದ್ದಿದ ಗಾಯ, ಎಡ ಕೈಗೆ ಗುದ್ದಿದ ಹಾಗೂ ತರಚಿದ ಗಾಯ, ಬಲ ಕಾಲಿಗೆ ಗುದ್ದಿದ ಹಾಗೂ ತರಚಿದ ಗಾಯ ಮತ್ತು ದೇಹದ ಇತರ ಭಾಗಗಳಿಗೆ ಗುದ್ದಿದ ಹಾಗೂ ತರಚಿದ ಗಾಯಗಳಾಗಿದ್ದು, ಗಾಯಾಳು ವಿಜಿತ್ ರವರನ್ನು ಚಿಕಿತ್ಸೆಯ ಬಗ್ಗೆ ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಬೆಳಿಗ್ಗೆ 9:44 ರ ವೇಳೆಗೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿರುತ್ತಾರೆ.
ಅಪಘಾತಕ್ಕೆ ಕಾರಣವಾದ ಟಿಎಸ್-08 ಯುಜೆ-6666 ನೋಂದಣಿ ಸಂಖ್ಯೆಯ ಪಿಕಪ್ ಚಾಲಕ ರಾಮ್ ಮೊಹನ ರಾವ್ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಬಂಟ್ವಾಳ ಸಂಚಾರಿ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 07/2023 ಕಲಂ 279, 304 (ಎ) ಐಪಿಸಿಯಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
0 comments:
Post a Comment