ಪುತ್ತೂರು, ಜನವರಿ 10, 2023 (ಕರಾವಳಿ ಟೈಮ್ಸ್) : ಶ್ರೀರಾಮ್ ಫೈನಾನ್ಸ್ ಕಂಪೆನಿ ಲಿಮಿಟೆಡ್ ಇದರ ಸುಳ್ಯ ಶಾಖಾ ವತಿಯಿಂದ ಸುಳ್ಯ ತಾಲೂಕಿನ ಆಯ್ದ ಅರ್ಹ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಧಿ ವಿತರಣಾ ಕಾರ್ಯಕ್ರಮ ಜನವರಿ 20 ರಂದು ಶುಕ್ರವಾರ (ನಾಳೆ) ಬೆಳಿಗ್ಗೆ 10 ಗಂಟೆಗೆ ಇಲ್ಲಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.
ಕಂಪೆನಿಯ ಸಂಸ್ಥೆಯ ಝೋನಲ್ ಬಿಝಿನೆಸ್ ಹೆಡ್ ಶರಶ್ಚಂದ್ರ ಭಟ್ ಕಾಕುಂಜೆ ಕಾರ್ಯಕ್ರಮ ಉದ್ಘಾಟಿಸಲಿದ್ದು, ರಾಜ್ಯ ಬಂದರು, ಒಳನಾಡು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ, ಸುಳ್ಯ ಶಾಸಕ ಎಸ್ ಅಂಗಾರ ವಿದ್ಯಾರ್ಥಿ ನಿಧಿ ವಿತರಣೆ ಮಾಡುವರು. ಮುಖ್ಯ ಅತಿಥಿಗಳಾಗಿ ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ, ನಿವೃತ್ತ ಪ್ರಾಂಶುಪಾಲ ಕೆ ಆರ್ ಗಂಗಾಧರ, ಸುಳ್ಯ ತಾ ಪಂ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಎಸ್, ಸುಳ್ಯ ಲಾರಿ ಚಾಲಕ-ಮಾಲಕರ ಸಂಘದ ಅಧ್ಯಕ್ಷ ದಿನೇಶ್ ಅಡ್ಕಾರ್, ಐವರ್ನಾಡು ಪ್ರಾಥಮಿಕ ಕೃಷಿ ಸಹಕಾರಿ ಸಂಘದ ಅಧ್ಯಕ್ಷ ಎಸ್ ಎನ್ ಮನ್ಮಥ ಭಾಗವಹಿಸುವರು.
ಸಂಸ್ಥೆಯ ಝೋನಲ್ ರಿಕವರಿ ಹೆಡ್ ನಾಗರಾಜ ಬಿ, ಸ್ಟೇಟ್ ಹೆಡ್ ಸದಾಶಿವ, ರೀಜನಲ್ ಬ್ಯುಸಿನೆಸ್ ಹೆಡ್ ಚೇತನ್ ಅರಸ್, ರೀಜನಲ್ ಕಲೆಕ್ಷನ್ ಹೆಡ್ ಪ್ರಮೋದ್ ಅಂಚನ್, ಆರ್ ಬಿ ಎಚ್ ಮಹೇಶ್ ಕುಮಾರ್ ಸಿ ಎಚ್ ಮೊದಲಾದವರು ಉಪಸ್ಥಿತರಿರುವರು.
ಕಾರ್ಯಕ್ರಮದಲ್ಲಿ 57 ಮಂದಿ ಪಿಯುಸಿ ವಿದ್ಯಾರ್ಥಿಗಳಿಗೆ ತಲಾ 3,500/- ರಂತೆ 1 ಲಕ್ಷದ 99 ಸಾವಿರದ 500 ರೂಪಾಯಿ ಹಾಗೂ 201 ಮಂದಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತಲಾ 3 ಸಾವಿರ ರೂಪಾಯಿಯಂತೆ 6.3 ಲಕ್ಷ ರೂಪಾಯಿ ಸೇರಿ ಒಟ್ಟು 258 ಮಂದಿ ವಿದ್ಯಾರ್ಥಿಗಳಿಗೆ 8 ಲಕ್ಷದ 2 ಸಾವಿರದ 500 ರೂಪಾಯಿ ವಿದ್ಯಾರ್ಥಿ ನಿಧಿ ವಿತರಿಸಲಾಗುವುದು ಎಂದು ಸಂಸ್ಥೆಯ ಸುಳ್ಯ ಶಾಖಾಧಿಕಾರಿ ಆನಂದ ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
0 comments:
Post a Comment