ಬಂಟ್ವಾಳ, ಫೆಬ್ರವರಿ 24, 2023 (ಕರಾವಳಿ ಟೈಮ್ಸ್) : ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ರಿಯ ತುಂಬೆ ಗ್ರಾಮದ ಬೊಳ್ಳಾರಿ ಎಂಬಲ್ಲಿನ ಕುನಿಲ್ ಶಾಲಾ ಬಳಿ ಗುರುವಾರ ಸಂಜೆ 6.30 ರ ವೇಳೆಗೆ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಧಿತ ಆರೋಪಿಯನ್ನು ಬಿಹಾರ ರಾಜ್ಯದ ವೈಶಾಲಿ ಜಿಲ್ಲೆಯ ಫಾತೇಪುರ ತಾಲೂಕಿನ ಭೀರೋಕರ ನಿವಾಸಿ ಕಮಲ ದೇವರಾಮ ಎಂಬವರ ಪುತ್ರ ರಾಜನ್ ಕುಮಾರ (23) ಎಂದು ಹೆಸರಿಸಲಾಗಿದೆ.
ಈತ ಸಾರ್ವಜನಿಕ ಪ್ರದೇಶದಲ್ಲಿ ಗಾಂಜಾ ಸೇವಿಸಿ ನಶೆ ಏರಿ ಜನರಿಗೆ ತೊಂದರೆ ನೀಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸ್ ಇನ್ಸ್ ಪೆಕ್ಟರ್ ಸಂತೋಷ್ ಶೆಟ್ಟಿ ನೇತೃತ್ವದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅಪರಾಧ ಕ್ರಮಾಂಕ 18/2023 ಕಲಂ 27(ಬಿ) NDPS ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
0 comments:
Post a Comment