ಬಂಟ್ವಾಳ, ಫೆಬ್ರವರಿ 28, 2023 (ಕರಾವಳಿ ಟೈಮ್ಸ್) : ಬಿ ಸಿ ರೋಡು ಪೇಟೆಯ ಹೃದಯ ಭಾಗದಲ್ಲಿ ಕ್ಯಾಂಟೀನಿಗೆ ಸೋಮವಾರ ರಾತ್ರಿ ಬೆಂಕಿ ಆಕಸ್ಮಿಕ ಸಂಭವಿಸಿದ್ದು, ಹೋಟೆಲ್ ಒಳಗಿನ ಸಾಮಾಗ್ರಿಗಳು ಸಂಪೂರ್ಣ ಅಗ್ನಿಗಾಹುತಿಯಾಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.
ಬಿ ಸಿ ರೋಡಿನ ಖಾಸಗಿ ಬಸ್ ನಿಲ್ದಾಣ ಬಳಿಯ ಕ್ಯಾಂಟೀನಿನಲ್ಲಿ ಈ ಬೆಂಕಿ ಅವಘಡ ಸಂಭವಿಸಿದ್ದು, ಕಾರಣ ತಿಳಿದು ಬಂದಿಲ್ಲ. ರಾತ್ರಿ ಸುಮಾರು 7 ಗಂಟೆಯ ಬಳಿಕ ಈ ಅವಘಡ ಸಂಭವಿಸಿದ್ದು, ತಕ್ಷಣ ಸ್ಪಂದಿಸಿದ ಸ್ಥಳೀಯರು ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಈ ಸ್ಥಳದಲ್ಲಿ ಹತ್ತಿರ ಹತ್ತಿರ ಅಂಗಡಿ-ಮನೆಗಳಿದ್ದು, ತಡ ರಾತ್ರಿ ವೇಳೆ ಏನಾದರೂ ಈ ಬೆಂಕಿ ಅವಘಡ ಸಂಭವಿಸಿದ್ದರೆ ಭಾರೀ ಅನಾಹುತ ಆಗುವ ಸಾಧ್ಯತೆ ಇತ್ತು. ಬಂಟ್ವಾಳ ಅಗ್ನಿ ಶಾಮಕ ಸಿಬ್ಬಂದಿಗಳಿಗೆ ಮಾಹಿತಿ ನೀಡಲಾಗಿದ್ದರೂ ಅಗ್ನಿಶಾಮಕ ವಾಹನ ಸ್ಥಳಕ್ಕೆ ಬರುವಾಗ ತಾಸಿಗೂ ಅಧಿಕ ಸಮಯ ತಗಲಿದೆ. ಈ ಹಿನ್ನಲೆಯಲ್ಲಿ ಸ್ಥಳೀಯರೇ ಕಾರ್ಯಪ್ರವೃತ್ತರಾಗಿ ಬೆಂಕಿ ನಂದಿಸಿ ಅನಾಹುತ ತಪ್ಪಿಸಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
0 comments:
Post a Comment