ಬಂಟ್ವಾಳ, ಫೆಬ್ರವರಿ 14, 2023 (ಕರಾವಳಿ ಟೈಮ್ಸ್) : ಹಾಯ್ ಪುತ್ತೂರು ಪತ್ರಿಕೆಯ ಸಂಪಾದಕ, ಇಡ್ಕಿದು ಗ್ರಾಮದ ಮಿತ್ತೂರು ನಿವಾಸಿ ಹಾಜಿ ಹಮೀದ್ ಖಂದಕ್ (60) ಅವರು ಹೃದಯಾಘಾತದಿಂದ ಮಂಗಳವಾರ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮಂಗಳವಾರ ಬೆಳಿಗ್ಗೆ ಕಾರ್ಯನಿಮಿತ್ತ ಪುತ್ತೂರಿಗೆ ತೆರಳಿದ್ದ ವೇಳೆ ಇವರು ಕಛೇರಿಯೊಂದರ ಬಳಿ ಹಠಾತ್ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ಸಾಗಿಸಿದರಾದರೂ ಚಿಕಿತ್ಸೆಗೆ ಸ್ಪಂದಿಸದೆ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮೃತರು ಮಿತ್ತೂರು ಸಿರಾಜುಲ್ ಹುದಾ ಜುಮಾ ಮಸೀದಿ ಅಧ್ಯಕ್ಷರಾಗಿ, ಕಾರ್ಯದರ್ಶಿಯಾಗಿ, ಜಿಲ್ಲಾ ಮದರಸ ಮೆನೇಜ್‍ಮೆಂಟ್ ಕಾರ್ಯದರ್ಶಿಯಾಗಿ, ದ ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಸಂಘಟನಾ ಕಾರ್ಯದರ್ಶಿ ಸಹಿತ ಹಲವಾರು ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಸಂಘ-ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಮೃತರು ಪತ್ನಿ, ಮೂವರು ಪುತ್ರರು, ಓರ್ವ ಪುತ್ರಿ ಸಹಿತ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
0 comments:
Post a Comment