ಮಂಗಳೂರು, ಫೆಬ್ರವರಿ 12, 2023 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಸೂಕ್ಷ್ಮ ಸ್ಥಳಗಳಲ್ಲಿ ಪೊಲೀಸ್ ಸಿಬ್ಬಂದಿಗಳ ಸಾಮಾನ್ಯ ಬ್ರಿಫಿಂಗ್ ಸಭೆ ನಡೆಸುವ ಹೊಸ ಪ್ರಕ್ರಿಯೆಗೆ ಚಾಲನೆ ನೀಡಲಾಯಿತು.
ಭಾನುವಾರ (ಫೆ 12) ಜಿಲ್ಲೆಯ ಎಲ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಸೂಕ್ಷ್ಮ ಸ್ಥಳಗಳಲ್ಲಿ ಸಂಬಂಧಪಟ್ಟ ಡಿವೈಎಸ್ಪಿ, ಪಿಐ /ಸಿಪಿಐ, ಪಿಎಸ್‍ಐ ರವರುಗಳು ಸಿಬ್ಬಂದಿಗಳ ಬ್ರಿಫಿಂಗ್ ಸಭೆ ನಡೆಸಿದರು. ಜಿಲ್ಲೆಯ ಪೊಲೀಸ್ ವ್ಯವಸ್ಥೆ ಇನ್ನು ಹೆಚ್ಚು ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸುವ ದೃಷ್ಟಿಯಿಂದ ಹಾಗೂ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸುವ ದೃಷ್ಟಿಯಿಂದ ಇಂತಹ ಸಭೆಗಳನ್ನು ಕಡ್ಡಾಯವಾಗಿ ಪ್ರತಿ ಭಾನುವಾರ ಜಿಲ್ಲೆಯ ಎಲ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಸೂಕ್ಷ್ಮ ಸ್ಥಳಗಳಲ್ಲಿ ನಡೆಸಲಾಗುವುದು ಎಂದು ಪೊಲೀಸ್ ಇಲಾಖಾ ಪ್ರಕಟಣೆ ತಿಳಿಸಿದೆ.
0 comments:
Post a Comment