ಪುತ್ತೂರು, ಫೆಬ್ರವರಿ 22, 2023 (ಕರಾವಳಿ ಟೈಮ್ಸ್) : ಪುತ್ತೂರಿನ ಲಿಟ್ಲ್ ಫ್ಲವರ್ ಶಾಲೆಯಲ್ಲಿ ಸುಮಾರು 200 ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಶಿಸ್ತು, ಸಮಾಜ ಸೇವೆ, ಮೊಬೈಲ್ ಪೊನ್ ಬಳಕೆಯಿಂದ ಆಗುವ ಕೆಟ್ಟ ಪರಿಣಾಮಗಳು, ಸಂಚಾರ ನಿಯಮಗಳ ಪಾಲನೆ, ಮಕ್ಕಳ ಹಕ್ಕುಗಳು ಇತ್ಯಾದಿ ವಿಷಯಗಳ ಬಗ್ಗೆ ಅರಿವು ಕಾರ್ಯಕ್ರಮ ನಡೆಸಿಕೊಟ್ಟ ಪುತ್ತೂರು ನಗರ ಪೊಲೀಸ್ ಠಾಣಾ ಪಿಎಸೈ ಶ್ರೀಕಾಂತ್ ರಾಠೋಡ್ ಅವರು ಬಳಿಕ ಪುತ್ತೂರು ಎಚ್ ಆರ್ ಎಸ್ ಇನ್ಸಿಟಿಟ್ಯೂಶನ್ ಆಫ್ ನರ್ಸಿಂಗ್ ಆಂಡ್ ಪ್ಯಾರಾಮೆಡಿಕಲ್ ಸೈನ್ಸ್ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ಸೈಬರ್ ಕ್ರೈಂ, ಸಾಮಾಜಿಕ ಜಾಲತಾಣಗಳ ಬಳಕೆಯಿಂದ ಆಗುವ ಕೆಟ್ಟ ಪರಿಣಾಮಗಳು ಹಾಗೂ ಸಾಮಾಜಿಕ ಜಾಲತಾಣ ಬಳಸುವಾಗ ತೆಗೆದುಕೊಳ್ಳಬೇಕಾದ ಎಚ್ಚರಿಕೆ ಕ್ರಮಗಳು, ಸಂಚಾರಿ ನಿಯಮಗಳ ಬಗ್ಗೆ, ಪೊಕ್ಸೋ ಕಾಯ್ದೆ, ಮಹಿಳೆಯರ ಕಾಯ್ದೆಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ನಡೆಸಿಕೊಟ್ಟರು.
22 February 2023
- Blogger Comments
- Facebook Comments
Subscribe to:
Post Comments (Atom)
0 comments:
Post a Comment