ಬಂಟ್ವಾಳ, ಮಾರ್ಚ್ 03, 2023 (ಕರಾವಳಿ ಟೈಮ್ಸ್) : ಇಲ್ಲಿನ ನಗರ ಠಾಣಾ ವ್ಯಾಪ್ತಿಯ ಕಳ್ಳಿಗೆ ಗ್ರಾಮದ ಜಾರಂದಗುಡ್ಡೆ ಎಂಬಲ್ಲಿ ದಿನಸಿ ಅಂಗಡಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪಿಎಸ್ಸೈ ರಾಮಕೃಷ್ಣ ನೇತೃತ್ವದ ಪೊಲೀಸರು ಆರೋಪಿ ಸ್ಥಳೀಯ ನಿವಾಸಿ ದಿವಂಗತ ಆನಂದ ಎಂಬವರ ಪುತ್ರ ಅಶೋಕ್ (42) ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದು, 53 ಮದ್ಯದ ಸ್ಯಾಚೆಟ್ ಹಾಗೂ 500 ರೂಪಾಯಿ ನಗದು ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಟ್ವಾಳ ನಗರ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
2 March 2023
- Blogger Comments
- Facebook Comments
Subscribe to:
Post Comments (Atom)
0 comments:
Post a Comment