ಬಂಟ್ವಾಳ, ಮಾರ್ಚ್ 05, 2023 (ಕರಾವಳಿ ಟೈಮ್ಸ್) : ತಾಲೂಕಿನ ಪಾಣೆಮಂಗಳೂರು ಸಮೀಪದ ನಂದಾವರದಲ್ಲಿ ಭಾನುವಾರ ರಾತ್ರಿ ಬಿಗು ಪೊಲೀಸ್ ಬಂದೋಬಸ್ತಿನಲ್ಲಿ ಅಧಿಕಾರಿಗಳು ಮನೆಗಳ ಮೇಲೆ ದಾಳಿ ನಡೆಸಿ ದೀರ್ಘ ತಪಾಸಣೆ ನಡೆಸುತ್ತಿದ್ದಾರೆ. ಆದರೆ ಯಾವ ಇಲಾಖಾಧಿಕಾರಿಗಳು ಈ ದಾಳಿ ನಡೆಸಿದ್ದಾರೆ, ಯಾವ ಕಾರಣಕ್ಕಾಗಿ ದಾಳಿ ನಡೆಸಿದ್ದಾರೆ ಎನ್ನುವುದೆಲ್ಲವೂ ಅಸ್ಪಷ್ಟವಾಗಿದೆ.
ಈ ಸಂಬಂಧ ಕೆಲ ವ್ಯಕ್ತಿಗಳನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದ್ದು, ಅವರು ನೀಡಿದ ಮಾಹಿತಿ ಆಧರಿಸಿ ಮನೆ ತಲಾಶ್ ನಡೆಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ.
ಪಾಣೆಮಂಗಳೂರು ಹಾಗೂ ಮೆಲ್ಕಾರಿನ ಎರಡು ಆನ್ ಲೈನ್ ಸೇವೆ ನಡೆಸುವ ಸೈಬರ್ ಸೆಂಟರ್ ಗಳಿಗೆ ಭಾನುವಾರ ಮಧ್ಯಾಹ್ನದ ವೇಳೆಗೆ ದಾಳಿ ನಡೆಸಿದ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ ಎನ್ನಲಾಗಿದೆ. ರಾತ್ರಿ ವೇಳೆ ಮತ್ತೆ ನಂದಾವರ ಪ್ರದೇಶದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಿ ತಡ ರಾತ್ರಿವರೆಗೂ ಮನೆ ತಪಾಸಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಆದರೆ ಈ ಬಗ್ಗೆ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಲು ನಿರಾಕರಿಸಿದ್ದಾರೆ.
0 comments:
Post a Comment