ಮಂಗಳೂರು, ಮಾರ್ಚ್ 22, 2023 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಎಲ್ಲ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ವಿಶೇಷ ಡ್ರೈವ್ ನಡೆಸಿ ಸ್ಥಳೀಯ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿನ ಶಾಲೆ, ಕಾಲೇಜುಗಳ ಸುತ್ತಮುತ್ತ ಇರುವ ಗೂಡಂಗಡಿ, ಹೋಟೆಲ್ ಗಳು, ಜೆರಾಕ್ಸ್ ಸೆಂಟರ್ ಗಳು, ಪಾನ್ ಶಾಪ್ ಗಳು, ಕಿರಾಣಿ ಅಂಗಡಿ ಮುಂತಾದ ಕಡೆ ಏಕಕಾಲದಲ್ಲಿ ಅನಿರೀಕ್ಷಿತವಾಗಿ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಭೇಟಿ ನೀಡಿ ತಪಾಸಣೆ ನಡೆಸಿದರು.
ಕಾನೂನು ಬಾಹಿರವಾಗಿ ಗುಟ್ಕಾ, ಸಿಗರೇಟ್ ಮಾರಾಟ ಮಾಡುವವರ ಮೇಲೆ ಕೋಟ್ಪಾ ಕಾಯ್ದೆಯಡಿ ಕ್ರಮ ಕೈಗೊಂಡು, ಯಾವುದೇ ರೀತಿಯ ಅಕ್ರಮ ಚಟುವಟಿಕೆ ನಡೆಸದಂತೆ ಎಚ್ಚರಿಕೆ ನೀಡಿದರು.
0 comments:
Post a Comment