ಮಂಗಳೂರು, ಮಾರ್ಚ್ 03, 2023 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಬಂಟ್ವಾಳ ಗ್ರಾಮಾಂತರ ಠಾಣೆ, ಬಂಟ್ವಾಳ ನಗರ ಠಾಣೆ, ಸುಳ್ಯ ಠಾಣೆ ಮತ್ತು ವಿಟ್ಲ ಪೊಲೀಸ್ ಠಾಣೆಗಳ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಪರವಾನಿಗೆ ಪಡೆಯದೇ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾಗ ಸಂಬಂಧಪಟ್ಟ ಠಾಣಾಧಿಕಾರಿಗಳು ದಾಳಿ ನಡೆಸಿ ಅಂದಾಜು 12,786/- ರೂಪಾಯಿ ಮೌಲ್ಯದ 39.79 ಲೀಟರ್ ಮದ್ಯದ ಬಾಟಲಿಗಳನ್ನು ಜಪ್ತಿ ಪಡಿಸಿಕೊಂಡಿದ್ದಾರಲ್ಲದೆ 4 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದು ಅವರುಗಳ ವಿರುದ್ದ ಸಂಬಂಧಪಟ್ಟ ಪೆÇಲೀಸ್ ಠಾಣೆಯಲ್ಲಿ ಕರ್ನಾಟಕ ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬಂಧಿತ ಆರೋಪಿಗಳನ್ನು ಬಂಟ್ವಾಳ ತಾಲೂಕು, ಕನ್ಯಾನ ಗ್ರಾಮದ ಕಣಿಯೂರು ನಿವಾಸಿ ಚನಿಯ ಅವರ ಪುತ್ರ ಗಂಗಾಧರ (50), ಬಂಟ್ವಾಳ ತಾಲೂಕು ಬಡಗಬೆಳ್ಳೂರು ಗ್ರಾಮದ ನೆಲ್ಲಿಮಾರು ನಿವಾಸಿ ದೂಮಪ್ಪ ಎಂಬವರ ಪುತ್ರ ಯಾದವ ಕುಲಾಲ್ (56), ಸುಳ್ಯ ತಾಲೂಕು, ತೋಡಿಕಾನ ಗ್ರಾಮದ ಅಡ್ಯನಡ್ಕ ನಿವಾಸಿ ದಿವಂಗತ ಪಳನಿ ಎಂಬವರ ಪುತ್ರ ಅಣ್ಣ ದೊರೈ (52) ಹಾಗೂ ಬಂಟ್ವಾಳ ತಾಲೂಕು ಕಳ್ಳಿಗೆ ಗ್ರಾಮದ ಜಾರಂದಗುಡ್ಡೆ ನಿವಾಸಿ ದಿವಂಗತ ಆನಂದ ಅವರ ಪುತ್ರ ಅಶೋಕ (42) ಎಂದು ಹೆಸರಿಸಲಾಗಿದೆ.
ಈ ಬಗ್ಗೆ ಬಂಟ್ವಾಳ ನಗರ, ಗ್ರಾಮಾಂತರ, ವಿಟ್ಲ ಹಾಗೂ ಸುಳ್ಯ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.
0 comments:
Post a Comment