ಮಂಗಳೂರು, ಮಾರ್ಚ್ 03, 2023 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ 75ನೇ ಆಜಾದಿ ಕ ಅಮೃತ ಮಹೋತ್ಸವ ಕಾರ್ಯಕ್ರಮದ ನಿಮಿತ್ತ ಪದಕ ಪ್ರಧಾನ ಕಾರ್ಯಕ್ರಮ ಶುಕ್ರವಾರ ನಡೆಯಿತು.
ಈ ಸಂದರ್ಭ ವಿಶೇಷ ಆಹ್ವಾನಿತರಾಗಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಮಟ್ಟಾರ ವಿಠಲ ಕಿಣಿ ಅವರು ಭಾಗವಹಿಸಿದ್ದು, ಅಧಿಕಾರಿ ಸಿಬ್ಬಂದಿಗಳಿಗೆ ಸಾಂಕೇತಿಕವಾಗಿ ಪದಕ ಪ್ರಧಾನ ಮಾಡಿದರು. ಇದೇ ವೇಳೆ ಫೆಬ್ರವರಿ ತಿಂಗಳಲ್ಲಿ ಅತ್ಯುತ್ತಮವಾಗಿ ಕರ್ತವ್ಯ ನಿರ್ವಹಿಸಿದ ಅಧಿಕಾರಿ, ಸಿಬ್ಬಂದಿಗಳಿಗೆ ಪ್ರಶಂಸನಾ ಪತ್ರ ಹಾಗೂ ನಗದು ಬಹುಮಾನವನ್ನು ನೀಡಿ ಪೆÇ್ರೀತ್ಸಾಹಿಸಲಾಯಿತು. ಮಟ್ಟಾರ ವಿಠಲ ಕಿಣಿ ಅವರಿಗೆ ಜಿಲ್ಲಾ ಎಸ್ಪಿ ಅವರು ಸ್ಮರಣಿಕೆ ನೀಡಿ ಗೌರವಿಸಿದರು.
0 comments:
Post a Comment