ಧರ್ಮಸ್ಥಳ, ಮಾರ್ಚ್ 28, 2023 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಧರ್ಮಸ್ಥಳ ಪೊಲೀಸ್ ಠಾಣಾ ನೂತನ ಕಟ್ಟಡ ಉದ್ಘಾಟನೆ ಮಂಗಳವಾರ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು ಹಾಗೂ ರಾಜ್ಯ ಸಭಾ ಸದಸ್ಯರೂ ಆಗಿರುವ ಡಾ ಡಿ ವೀರೇಂದ್ರ ಹೆಗ್ಗಡೆ ಹಾಗೂ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರುಗಳು ನೂತನ ಪೊಲೀಸ್ ಠಾಣಾ ಕಟ್ಟಡವನ್ನು ಉದ್ಘಾಟಿಸಿದರು.
ಈ ಸಂದರ್ಭ ಜಿಲ್ಲಾ ಎಸ್ಪಿ ಡಾ ವಿಕ್ರಂ ಅಮಾಟೆ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಸ್ಥಳೀಯ ಗ್ರಾ ಪಂ ಅಧ್ಯಕ್ಷ ಜಯ ಮೋನ್ನಪ್ಪ ಗೌಡ ಸಹಿತ ಜಿಲ್ಲೆಯ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಭಾಗವಹಿಸಿದ್ದರು.
0 comments:
Post a Comment