ಮಂಗಳೂರು, ಮಾರ್ಚ್ 30, 2023 (ಕರಾವಳಿ ಟೈಮ್ಸ್) : ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ-2023 ಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಕ್ತ, ನ್ಯಾಯ ಸಮ್ಮತ ಹಾಗೂ ಶಾಂತಿಯುತ ಚುನಾವಣೆ ನಡೆಸುವ ಉದ್ದೇಶದಿಂದ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳು ಭಾರತೀಯ ಶಸ್ತ್ರಾಸ್ತ್ರ ಕಾಯಿದೆ 1959 ರ ಕಲಂ 17 (3) (ಬಿ) ರನ್ವಯ, ಜಿಲ್ಲೆಯಲ್ಲಿರುವ ಬೆಳೆ ರಕ್ಷಣೆ ಹಾಗೂ ಆತ್ಮರಕ್ಷಣೆಗಾಗಿ ಶಸ್ತ್ರಾಸ್ತ್ರ ಪರವಾನಿಗೆ ಹೊಂದಿರುವ ಪರವಾನಿಗೆದಾರರು ತಮ್ಮ ಬಳಿಯಿರುವ ಶಸ್ತ್ರಾಸ್ತ್ರಗಳನ್ನು ಸ್ಥಳೀಯ ಪೆÇಲೀಸ್ ಠಾಣೆಗಳಲ್ಲಿ ಅಥವಾ ಅಧಿಕೃತ ಕೋವಿ ಮದ್ದುಗುಂಡು ವ್ಯಾಪಾರಸ್ಥರಲ್ಲಿ ಜಮಾ ಮಾಡಲು ಆದೇಶಿಸಿದ್ದಾರೆ.
ಶೀಘ್ರವಾಗಿ ಶಸ್ತ್ರಾಸ್ತ್ರ ಪರವಾನಿಗೆದಾರರು ತಮ್ಮ ಬಳಿಯಿರುವ ಶಸ್ತ್ರಾಸ್ತ್ರಗಳನ್ನು ಸ್ಥಳೀಯ ಪೆÇಲೀಸ್ ಠಾಣೆಗಳಲ್ಲಿ ಜಮಾ ಮಾಡಿ ರಶೀದಿಗಳನ್ನು ಪಡೆದುಕೊಳ್ಳುವುದು ಅಥವಾ ಅಧಿಕೃತ ಕೋವಿ ಮದ್ದುಗುಂಡು ವ್ಯಾಪಾರಸ್ಥರಲ್ಲಿ ಜಮಾ ಮಾಡಿ ಈ ಬಗ್ಗೆ ಮಾಹಿತಿಯನ್ನು ಸ್ಥಳೀಯ ಪೆÇಲೀಸ್ ಠಾಣೆಗೆ ನೀಡುವುದು. ಇದಕ್ಕೆ ತಪ್ಪಿದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯಲ್ಲಿರುವ ಶಸ್ತ್ರಾಸ್ತ್ರ ಪರವಾನಿಗೆದಾರರು ಈ ವಿಷಯದಲ್ಲಿ ಪೆÇಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಜಿಲ್ಲಾ ಎಸ್ಪಿ ಕೋರಿದ್ದಾರೆ.
0 comments:
Post a Comment