ಬೆಂಗಳೂರು, ಮಾರ್ಚ್ 05, 2023 (ಕರಾವಳಿ ಟೈಮ್ಸ್) : ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮಾರ್ಚ್ 9 ರಿಂದ ವಾರ್ಷಿಕ ಪರೀಕ್ಷೆ ಆರಂಭಗೊಳ್ಳುತ್ತಿದ್ದು, ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆ ಎಸ್ ಆರ್ ಟಿ ಸಿ) ಸಂಸ್ಥೆಯ ಬಸ್ಸುಗಳಲ್ಲಿ ಪರೀಕ್ಷಾರ್ಥಿಗಳಿಗೆ ಉಚಿತ ಪ್ರಯಾಣದ ವ್ಯವಸ್ಥೇ ಕಲ್ಪಿಸಿ ಆದೇಶ ಹೊರಡಿಸಿದೆ.
ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಗದಿತ ಪರೀಕ್ಷಾ ಕೇಂದ್ರಗಳಿಗೆ ತೆರಳುವರೇ ಪರೀಕ್ಷಾ ಪ್ರವೇಶ ಪತ್ರ ತೋರಿಸಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರ ಪ್ರಕಟಣೆ ತಿಳಿಸಿದೆ.
0 comments:
Post a Comment