ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ದಿನ ಕೆ.ಎಸ್.ಆರ್.ಟಿ.ಸಿ. ಬಸ್ಸುಗಳಲ್ಲಿ ಉಚಿತ ಪ್ರಯಾಣ : ನಿಗಮ ನಿರ್ದೇಶಕರಿಂದ ಆದೇಶ - Karavali Times ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ದಿನ ಕೆ.ಎಸ್.ಆರ್.ಟಿ.ಸಿ. ಬಸ್ಸುಗಳಲ್ಲಿ ಉಚಿತ ಪ್ರಯಾಣ : ನಿಗಮ ನಿರ್ದೇಶಕರಿಂದ ಆದೇಶ - Karavali Times

728x90

21 March 2023

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ದಿನ ಕೆ.ಎಸ್.ಆರ್.ಟಿ.ಸಿ. ಬಸ್ಸುಗಳಲ್ಲಿ ಉಚಿತ ಪ್ರಯಾಣ : ನಿಗಮ ನಿರ್ದೇಶಕರಿಂದ ಆದೇಶ

ಬೆಂಗಳೂರು, ಮಾರ್ಚ್ 22, 2023 (ಕರಾವಳಿ ಟೈಮ್ಸ್) : ರಾಜ್ಯದ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಕೆ ಎಸ್ ಆರ್ ಟಿ ಸಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿ ಆದೇಶಿಸಿದೆ. 

ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ಕೆಎಸ್‍ಆರ್‍ಟಿಸಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಮಾರ್ಚ್ 31 ರಿಂದ ಎಪ್ರಿಲ್ 15ರವರೆಗೆ ನಡೆಯಲಿದ್ದು, ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರ ತೋರಿಸಿ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಪ್ರಯಾಣಿಸಬಹುದು ಎಂದು ನಿಗಮದ ನಿರ್ದೇಶಕರು ಆದೇಶದಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಸುತ್ತೋಲೆ ಹೊರಡಿಸಿರುವ ಕರ್ನಾಟಕ ರಾಜ್ಯ ಸಾರಿಗೆ ನಿಗಮದ ನಿರ್ದೇಶಕರು ಚಾಲಕ,ನಿರ್ವಾಹಕ ಹಾಗೂ ಸಿಬ್ಬಂದಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರು ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕೋರಿದ ಹಿನ್ನಲೆಯಲ್ಲಿ ನಿಗಮದ ನಿರ್ದೇಶಕರು ಈ ಆದೇಶ ಹೊರಡಿಸಿದ್ದಾರೆ. 

ಪರೀಕ್ಷಾ ಸಂದರ್ಭದಲ್ಲಿ ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೆಟ್ ಸಾರಿಗೆ ಸಿಬ್ಬಂದಿಗಳಿಗೆ ತೋರಿಸಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಅಂತೆಯೇ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ವಿದ್ಯಾರ್ಥಿಗಳ ಪ್ರವೇಶ ಪತ್ರದ ಆಧಾರದ ಮೇಲೆ ಬಸ್ ಪ್ರಯಾಣಿಸುವ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿಗೆ ತೆರಳಲು ವಿದ್ಯಾರ್ಥಿಗಳು ಬಸ್ ಹತ್ತಲು ಹಾಗೂ ಇಳಿಯಲು ಅನುಕೂಲ ಮಾಡಿಕೊಂಡುವಂತೆ ಸಿಬ್ಬಂದಿಗಳಿಗೆ ಸೂಚಿಸಲಾಗಿದೆ ಎಂದು ನಿಗಮದ ನಿರ್ದೇಶಕರು ಆದೇಶದಲ್ಲಿ ತಿಳಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ದಿನ ಕೆ.ಎಸ್.ಆರ್.ಟಿ.ಸಿ. ಬಸ್ಸುಗಳಲ್ಲಿ ಉಚಿತ ಪ್ರಯಾಣ : ನಿಗಮ ನಿರ್ದೇಶಕರಿಂದ ಆದೇಶ Rating: 5 Reviewed By: karavali Times
Scroll to Top