ಬಂಟ್ವಾಳ, ಮಾರ್ಚ್ 24, 2023 (ಕರಾವಳಿ ಟೈಮ್ಸ್) : ಕರ್ನಾಟಕ ಪ್ರದೇಶ ಜನತಾದಳ (ಜಾತ್ಯಾತೀತ) ಇದರ ಕರ್ನಾಟಕ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಹಿರಿಯ ನ್ಯಾಯವಾದಿ ಉಮೇಶ್ ಕುಮಾರ್ ವೈ ಅವರನ್ನು ನೇಮಕಗೊಳಿಸಿ ಪಕ್ಷದ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಆದೇಶಿಸಿದ್ದಾರೆ.
ವಕೀಲ ಉಮೇಶ್ ಕುಮಾರ್ ವೈ ಅವರು ಬಿ ಸಿ ರೋಡಿನ ಹಿರಿಯ ನ್ಯಾಯವಾದಿಯಾಗಿದ್ದು, ವಿದ್ಯಾರ್ಥಿ ದೆಸೆಯಿಂದಲೇ ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದು, ಯುವ ಜನತಾದಳ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಬಳಿಕ ಜೆಡಿಸ್ ಪಕ್ಷದ ವಿವಿಧ ಹುದ್ದೆಗಳನ್ನು ಅಲಂಕರಿಸಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಇದೀಗ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷವನ್ನು ಬಲಿಷ್ಠವಾಗಿ ಸಂಘಟಿಸಲಾಗುವುದು ಎಂದು ಉಮೇಶ್ ಕುಮಾರ್ ತಿಳಿಸಿದ್ದಾರೆ.
0 comments:
Post a Comment