ಬಂಟ್ವಾಳ, ಮಾರ್ಚ್ 01, 2023 (ಕರಾವಳಿ ಟೈಮ್ಸ್) : ಪೂಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿ ಅಗಲೀಕರಣದ ವೇಳೆ ಪಿಲಾತಬೆಟ್ಟು ಶ್ರೀರಾಮನಗರದ ಆಸ್ಪತ್ರೆಯ ಮುಂಭಾಗದಲ್ಲಿದ್ದ ಸಾರ್ವಜನಿಕ ಬಸ್ಸು ತಂಗುದಾಣ ತೆರವುಗೊಳಿಸಲಾಗಿದ್ದನ್ನು ಸಾರ್ವಜನಿಕರ ಅನುಕೂಲಕ್ಕಾಗಿ ವಲಯ ಕಾಂಗ್ರೆಸ್ ವತಿಯಿಂದ ಬಸ್ಸು ನಿಲ್ದಾಣ ಮರು ನಿರ್ಮಿಸಲಾಗಿದ್ದು, ಮಾಜಿ ಸಚಿವ ಬಿ ರಮನಾಥ ರೈ ಬುಧವಾರ ಉದ್ಘಾಟಿಸಿದರು.
ಕಾಂಗ್ರೆಸ್ ಕಾರ್ಯಕರ್ತರು ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವ ನಿಟ್ಟಿನಲ್ಲಿ ಬಸ್ಸು ನಿಲ್ದಾಣ ನಿರ್ಮಿಸಿರುವುದು ಶ್ಲಾಘನೀಯ ಎಂದು ಇದೇ ವೇಳೆ ಬಿ ರಮಾನಾಥ ರೈ ಮೆಚ್ಚುಗೆ ವ್ಯಕ್ತಪಡಿಸಿದರು.
ಇದೇ ವೇಳೆ ಬಿಜೆಪಿಯ ಸಕ್ರಿಯ ಕಾರ್ಯಕರ್ತರಾದ ಲಕ್ಷ್ಮಣ ಪೂಜಾರಿ ನಾಕುನಾಡು, ಸುಧಾಕರ ಪೂಜಾರಿ ನಾಕುನಾಡು, ಕಳೆದ ಪಂಚಾಯತ್ ಚುನಾವಣೆಗೆ ಬಿಜೆಪಿ ಬೆಂಬಲಿತರಾಗಿ ಸ್ಪರ್ಧಿಸಿದ ತುಳಸಿ ದುಗಮರಗುಡ್ಡೆ ಅವರು ಬಿಜೆಪಿ ತೊರೆದು ಮಾಜಿ ಸಚಿವ ಬಿ ರಮಾನಾಥ ರೈ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡರು.
ಬಿಜೆಪಿಯಿಂದ ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳು ಆಗದ ಕಾರಣ ಹಾಗೂ ಕಾರ್ಯಕರ್ತರನ್ನು ಗಣನೆಗೆ ತೆಗೆದುಕೊಳ್ಳದ ಕಾರಣ ಶಾಸಕ ರಾಜೇಶ್ ನಾಯಕ್ ನಡೆಗೆ ಬೇಸತ್ತು ಹಾಗೂ ಸ್ಥಳೀಯ ಕಾಂಗ್ರೆಸ್ ಬೆಂಬಲಿತ ಪಂಚಾಯತ್ ಸದಸ್ಯರ ಉತ್ತಮ ಕೆಲಸ ಕಾರ್ಯಗಳಿಂದ ಪ್ರೇರಿತಗೊಂಡು ಕಾಂಗ್ರೆಸ್ ಸೇರ್ಪಡೆಗೊಂಡಿರುವುದಾಗಿ ತಿಳಿಸಿದರು.
ಈ ಸಂದರ್ಭ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಅಕ್ರಮ-ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲಿಯಾನ್, ಜಿ ಪಂ ಮಾಜಿ ಸದಸ್ಯ ಬಿ ಪದ್ಮಶೇಖರ ಜೈನ್, ಪ್ರಮುಖರಾದ ಸುಧಾಕರ್ ಶೆಣ್ ಖಂಡಿಗ, ಪುಷ್ಪಲತಾ ಮೋಹನ್ ಸಾಲಿಯಾನ್, ವನಿತಾ ಆನಂದ, ಲೀಲಾವತಿ ಶೆಟ್ಟಿ ನೆಲ್ವಿಸ್ಟರ್ ಪಿಂಟೊ, ಬಾಲಾಜಿ ರಾವ್, ಬೆನ್ನಡಿಟ್ಟ ಡಿಸೋಜಾ, ಅರುಣ್ ಫೆರ್ನಾಂಡಿಸ್, ಪುರುಷೋತ್ತಮ ನಾಕುನಾಡು, ವಿಠಲ ಶೆಟ್ಟಿ, ವಸಂತ ಹೆಗಡೆ, ಪ್ರಮುಖರಾದ ಮೋಹನ್ ಸಾಲಿಯಾನ್, ವಿಕ್ಟರ್ ಡಿ’ಸೋಜಾ, ಅಂಬ್ರೋಸ್ ಮೋರಸ್, ಲಾರೆನ್ಸ್ ಡಿ’ಸೋಜ, ಪ್ರಮೋದ್, ಕರುಣಾಕರ ನಾಕುನಾಡು, ನಾರಾಯಣ ಪೂಜಾರಿ ನಾಕುನಾಡು, ಅವಿಲ್ ಮೊರಸ್ ಮೊದಲಾದವರು ಉಪಸ್ಥಿತರಿದ್ದರು.
0 comments:
Post a Comment