ಮಂಗಳೂರು, ಮಾರ್ಚ್ 02, 2023 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಪೊಲೀಸ್ ಅಧಿಕಾರಿಗಳಿಗೆ ಹಾಗೂ ಚುನಾವಣೆಗೆ ಸಂಬಂದಿಸಿದ ಕರ್ತವ್ಯ ನಿರ್ವಹಿಸುವ ಎಲ್ಲ ನೋಡಲ್ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಚುನಾವಣೆ ಕರ್ತವ್ಯಗಳಿಗೆ ಸಂಬಂದಿಸಿದ ವಿಶೇಷ ಕಾರ್ಯಾಗಾರ ಜಿಲ್ಲಾ ಪೊಲೀಸ್ ಕಚೇರಿಯ ಸಭಾಂಗಣದಲ್ಲಿ ಬುಧವಾರ (ಮಾ 1) ನಡೆಯಿತು.
ಕಾರ್ಯಾಗಾರದಲ್ಲಿ ಚುನಾವಣೆಗೆ ಸಂಬಂದಿಸಿದ ಕರ್ತವ್ಯಗಳು ಹಾಗೂ ಸಿದ್ಧತೆ ಗಳ ಬಗ್ಗೆ, ಚುನಾವಣೆ ದೃಷ್ಟಿಯಿಂದ ತೆಗೆದು ಕೊಳ್ಳಬೇಕಾದ ಮುಂಜಾಗ್ರತ ಕ್ರಮಗಳ ಬಗ್ಗೆ, ಚುನಾವಣೆಗೆ ಸಂಬಂದಿಸಿದ ಕಾನೂನುಗಳ ಬಗ್ಗೆ, ಚುನಾವಣೆ ನೀತಿ ಸಂಹಿತೆ ಇತ್ಯಾದಿ ವಿಷಯಗಳ ಬಗ್ಗೆ ತಿಳುವಳಿಕೆಯನ್ನು ನೀಡಲಾಯಿತು.
ಜಿಲ್ಲಾ ಎಸ್ಪಿ ಡಾ ವಿಕ್ರಂ ಅಮಾಟೆ ಅವರು ಮಾಹಿತಿ ಕಾರ್ಯಾಗಾರ ನಡೆಸಿಕೊಟ್ಟರು. ಈ ಸಂದರ್ಭ ಎಡಿಶನಲ್ ಎಸ್ಪಿ ಧರ್ಮಪ್ಪ, ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ಪ್ರತಾಪ್ ಸಿಂಗ್ ಥೋರಟ್, ಡಿಸಿಆರ್‍ಬಿ ಡಿವೈಎಸ್ಪಿ ಡಾ ಗಾನಾ ಪಿ ಕುಮಾರ್, ಪುತ್ತೂರು ಉಪವಿಭಾಗದ ಡಿವೈಎಸ್ಪಿ ಡಾ ವೀರಯ್ಯ ಹೀರೇಮಠ ಮೊದಲಾದವರು ಉಪಸ್ಥಿತರಿದ್ದರು.
0 comments:
Post a Comment