ಪುತ್ತೂರು, ಮಾರ್ಚ್ 06, 2023 (ಕರಾವಳಿ ಟೈಮ್ಸ್) : ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಆರ್ಯಾಪು ಗ್ರಾಮದ ಸಂಪ್ಯ ಮಸೀದಿ ಬಳಿ ಭಾನುವಾರ ರಾತ್ರಿ ಪೊಲೀಸ್ ವಾಹನ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ, ಪಾಣಾಜೆ ಕೃಷಿ ಪತ್ತಿನ ಸಹಕಾರ ಸಂಘ (ನಿ) ಸಂಸ್ಥೆಯ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮಣ ನಾಯ್ಕ (50) ಅವರು ಗಂಭೀರ ಗಾಯಗೊಂಡು, ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಈ ಬಗ್ಗೆ ಮೃತರ ಸಹೋದರ ರಾಮ ನಾಯ್ಕ ನೀಡಿದ ದೂರಿನಂತೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 19-2023 ಕಲಂ 279, 304 (ಎ) ಐಪಿಸಿಯಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
0 comments:
Post a Comment