ಬಂಟ್ವಾಳ, ಮಾರ್ಚ್ 17, 2023 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಶರೀಫ್ ಭೂಯಾ ಅವರನ್ನು ನೇಮಿಸಲಾಗಿದೆ.
ಪಾಣೆಮಂಗಳೂರು ವಲಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ, ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿರುವ ಇದರನ್ನು ಮಾಜಿ ಸಚಿವ ಬಿ ರಮಾನಾಥ ರೈ ಅವರ ಶಿಫಾರಸ್ಸಿನ ಮೇರೆಗೆ ದ ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕಾಧ್ಯಕ್ಷ ಕೆ ಕೆ ಶಾಹುಲ್ ಹಮೀದ್ ಅವರು ಶರೀಫ್ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.
ಇವರ ನೇಮಕ ಆದೇಶ ಪತ್ರವನ್ನು ಗುರುವಾರ (ಮಾ 16) ಲೊರೆಟ್ಟೊಪದವಿನಲ್ಲಿ ನಡೆದ “ಬಂಟ್ವಾಳ ಪ್ರಜಾಧ್ವನಿ” ಯಾತ್ರೆಯ ಸಭಾ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಬಿ ರಮಾನಾಥ ರೈ ಅವರು ಹಸ್ತಾಂತರಿಸಿದರು.
0 comments:
Post a Comment