ಬೆಂಗಳೂರು, ಮಾರ್ಚ್ 02, 2023 (ಕರಾವಳಿ ಟೈಮ್ಸ್) : ರಾಜ್ಯ ಸರಕಾರದ ನಿರ್ದೇಶನದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2023ನೇ ಸಾಲಿನ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆ (ಯುಜಿಸಿಇಟಿ-2023) ಪರೀಕ್ಷೆಗೆ ದಿನಾಂಕ ಪ್ರಕಟಿಸಿದ್ದು, ಮೇ 20 ರಿಂದ 22ರವರೆಗೆ ಸಿಇಟಿ ಪರೀಕ್ಷೆಗಳು ನಡೆಯಲಿದೆ.
ಸಿಇಟಿ-2023ಕ್ಕೆ ಆನ್ ಲೈನ್ ಅರ್ಜಿ ಸಲ್ಲಿಕೆ ಫೆ 2 ರಂದು (ಇಂದಿನಿಂದ) ಬೆಳಿಗ್ಗೆ 11 ಗಂಟೆಯಿಂದ ಆರಂಭಿಸಲಾಗಿದ್ದು, ಎಪ್ರಿಲ್ 5 ರಂದು ಆನ್ ಲೈನ್ ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕವಾಗಿದೆ. ಶುಲ್ಕ ಪಾವತಿಗೆ ಎಪ್ರಿಲ್ 7 ಕೊನೆ ದಿನಾಂಕವಾಗಿದೆ.
ಮೇ 20 ರಂದು ಬೆಳಿಗ್ಗೆ ಜೀವಶಾಸ್ತ್ರ, ಮಧ್ಯಾಹ್ನ ಗಣಿತ ಶಾಸ್ತ್ರ, ಮೇ 21 ರಂದು ಬೆಳಿಗ್ಗೆ ಭೌತಶಾಸ್ತ್ರ, ಮಧ್ಯಾಹ್ನ ರಸಾಯನ ಶಾಸ್ತ್ರ ಪರೀಕ್ಷೆಗಳು ನಡೆಯಲಿದ್ದು, ಮೇ 22 ರಂದು ಬೆಳಿಗ್ಗೆ ಹೊರನಾಡು ಹಾಗೂ ಗಡಿನಾಡ ಕನ್ನಡಿಗ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಗಳು ನಡೆಯಲಿದೆ ಎಂದು ಪರೀಕ್ಷಾ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.
0 comments:
Post a Comment