ಬಂಟ್ವಾಳ, ಎಪ್ರಿಲ್ 20, 2023 (ಕರಾವಳಿ ಟೈಮ್ಸ್) : ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾದ ಗುರುವಾರ ಒಟ್ಟು 5 ನಾಮಪತ್ರಗಳು ಸಲ್ಲಿಕೆಯಾಗಿದೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಿಂದ ಬಿ ರಮಾನಾಥ ರೈ, ಜಾತ್ಯತೀತ ಜನತಾದಳ ಪಕ್ಷದಿಂದ ಪ್ರಕಾಶ್ ರಫಾಯಲ್ ಗೋಮ್ಸ್, ಆಮ್ ಆದ್ಮಿ ಪಾರ್ಟಿಯಿಂದ ಪುರುಷೋತ್ತಮ, ಉತ್ತಮ ಪ್ರಜಾಕೀಯ ಪಕ್ಷದಿಂದ ಅನೀಶ್ ಶೆಟ್ಟಿ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಬಿ ಟಿ ಕುಮಾರ್ ಅವರು ಗುರುವಾರ ಬಿ ಸಿ ರೋಡಿನ ಮಿನಿ ವಿಧಾನಸೌಧದ ಚುನಾವಣಾ ಕಚೇರಿಯಲ್ಲಿ ಚುನಾವಣಾಧಿಕಾರಿ ಆಬಿದ್ ಗದ್ಯಾಲ್ ಅವರಿಗೆ ನಾಮಪತ್ರ ಸಲ್ಲಿಸಿದ್ದಾರೆ. ಇದರೊಂದಿಗೆ ಕ್ಷೇತ್ರದಲ್ಲಿ ಒಟ್ಟು 8 ಮಂದಿ ನಾಮಪತ್ರ ಸಲ್ಲಿಸಿದ್ದಾರೆ.
ಎಪ್ರಿಲ್ 15 ರಂದು ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಯು ರಾಜೇಶ್ ನಾಯಕ್, ಎಪ್ರಿಲ್ 17 ರಂದು ಎಸ್ ಡಿ ಪಿ ಐ ಪಕ್ಷದಿಂದ ಇಲ್ಯಾಸ್ ಮುಹಮ್ಮದ್ ಅಬ್ದುಲ್ ಮಜೀದ್ ಅವರು ನಾಮಪತ್ರ ಸಲ್ಲಿಸಿದ್ದರು.
ಎಪ್ರಿಲ್ 21 ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಎಪ್ರಿಲ್ 24 ರಂದು ನಾಮಪತ್ರ ವಾಪಾಸು ಪಡೆಯಲು ಕೊನೆ ದಿನಾಂಕವಾಗಿದೆ. ಮೇ 10 ರಂದು ಚುನಾವಣೆ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ.
0 comments:
Post a Comment