ಬಿಜೆಪಿ, ಸುಡಾಪಿಯಿಂದ ಹಲವು ಯುವಕರು ಕೈ ಪಕ್ಷ ಸೇರ್ಪಡೆ, ಎಪ್ರಿಲ್ 20 ರಂದು ರಮಾನಾಥ ರೈ ನಾಮಪತ್ರ ಸಲ್ಲಿಕೆ,
ಬಂಟ್ವಾಳ, ಎಪ್ರಿಲ್ 16, 2023 (ಕರಾವಳಿ ಟೈಮ್ಸ್) : ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ, ಆರು ಬಾರಿಯ ಬಂಟ್ವಾಳದ ಶಾಸಕ ಬಿ ರಮಾನಾಥ ರೈ ಅವರು ಎಪ್ರಿಲ್ 20 ರಂದು ಗುರುವಾರ ಮಧ್ಯಾಹ್ನ ನಾಮಪತ್ರ ಸಲ್ಲಿಸಲಿದ್ದಾರೆ.
ಬಿ ಸಿ ರೋಡಿನ ಪಕ್ಷದ ಚುನಾವಣಾ ಕಚೇರಿಯಲ್ಲಿ ಭಾನುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಗುರುವಾರ ಬೆಳಿಗ್ಗೆ 9 ಗಂಟೆಯಿಂದ ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದಿಂದ ಪಾದಯಾತ್ರೆಯ ಮೂಲಕ ಬಿ ಸಿ ರೋಡಿನ ಮಿನಿ ವಿಧಾನಸೌಧದಲ್ಲಿರುವ ಚುನಾವಣಾ ಕಚೇರಿಗೆ ಬಂದು ನಾಮಪತ್ರ ಸಲ್ಲಿಸಲಾಗುವುದು ಎಂದು ತೀರ್ಮಾನಿಸಲಾಗಿದೆ.
ಈ ಸಂದರ್ಭ ಮಾತನಾಡಿದ ರಮಾನಾಥ ರೈ ಅವರು, ಕಾಂಗ್ರೆಸ್ ಯಾವತ್ತೂ ಜನರಿಗೆ ಸುಳ್ಳು ಹೇಳುವುದಿಲ್ಲ, ಕೊಟ್ಟ ಭರವಸೆಗಳನ್ನು ಈಡೇರಿಸಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರದಲ್ಲಿ ಬಡವರಿಗೆ ಏಳು ಕೆ ಜಿ ಅಕ್ಕಿ ನಿರಂತರವಾಗಿ ನೀಡುತ್ತಾ ಬರಲಾಗಿದೆ. ರೈತರಿಗೆ ಕೃಷಿಗೆ ಉಚಿತ ವಿದ್ಯುತ್ ಈಗಾಗಲೇ ಕೊಟ್ಟಿದ್ದೇವೆ. ಈ ಬಾರಿ ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರಕ್ಕೆ ಬಂದು ಈಗಾಗಲೇ ಪ್ರಕಟಿಸಿರುವ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದು ನಿಶ್ಚಿತ ಎಂದು ಭರವಸೆ ನೀಡಿದರು.
ಇದೇ ವೇಳೆ ಬಿಜೆಪಿ ಕಾರ್ಯಕರ್ತರುಗಳಾದ ಮುರಳೀಧರ ಬಾಂಬಿಲ, ಜನಾರ್ಧನ ಪಚ್ಚಿನಡ್ಕ ಕಳ್ಳಿಗೆ, ಎಸ್‍ಡಿಪಿಐ ಸಜಿಪಮೂಡ ಗ್ರಾಮ ಸಮಿತಿ ಅಧ್ಯಕ್ಷ ಝಕರಿಯಾ ಮಾಲಿಕ್ ಕೊಳಕೆ, ಮೊಹಮ್ಮದ್ ಶಾಕೀರ್, ಸವಾನ್ ಬೋಗೋಡಿ, ಸಫ್ವಾನ್ ಬೋಗೋಡಿ, ಮೊಹಮ್ಮದ್ ಇರ್ಷಾದ್ ಬೋಗೋಡಿ, ತಮೀಝ್ ಬೋಗೋಡಿ, ಮೊಹಮ್ಮದ್ ರಿಝ್ವಾನ್ ಗುಡ್ಡೆಯಂಗಡಿ, ಮೊಹಮ್ಮದ್ ಫಾರೀಸ್ ಮೊದಲಾದ ಯುವಕರು ತಮ್ಮ ಪಕ್ಷಗಳನ್ನು ತೊರೆದು ರಮಾನಾಥ ರೈ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಈ ಸಂದರ್ಭ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಕೆಪಿಸಿಸಿ ಸದಸ್ಯರುಗಳಾದ ಪಿಯೂಸ್ ಎಲ್ ರಾಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ್ ಜೈನ್, ಬಂಟ್ವಾಳ ಪುರಸಭಾಧ್ಯಕ್ಷ ಮುಹಮ್ಮದ್ ಶರೀಫ್ ಶಾಂತಿಅಂಗಡಿ, ಸದಸ್ಯರುಗಳಾದ ಹಸೈನಾರ್ ತಾಳಿಪಡ್ಪು, ಅಬೂಬಕ್ಕರ್ ಸಿದ್ದೀಕ್ ಗುಡ್ಡೆಅಂಗಡಿ, ಲುಕ್ಮಾನ್ ಬಿ ಸಿ ರೋಡು, ಜನಾರ್ದನ ಚೆಂಡ್ತಿಮಾರ್, ಮುಹಮ್ಮದ್ ನಂದರಬೆಟ್ಟು, ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕಾಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ, ಪಾಣೆಮಂಗಳೂರು ವಲಯ ಕಾಂಗ್ರೆಸ್ ಅಧ್ಯಕ್ಷ ಮುಹಮ್ಮದ್ ಇಕ್ಬಾಲ್ ಜೆಟಿಟಿ, ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಝ್ ಬಡಕಬೈಲು, ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದಶಿ ಇರ್ಶಾದ್ ಗುಡ್ಡೆಅಂಗಡಿ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಸುರೇಶ್ ಕುಮಾರ್ ನಾವೂರು, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಸಂಘಟನಾ ಕಾರ್ಯದರ್ಶಿ ಶರೀಫ್ ಭೂಯಾ, ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ಪೂಜಾರಿ, ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಲವೀನಾ ವಿಲ್ಮಾ ಮೊರಾಸ್, ಪ್ರಮುಖರಾದ ಪದ್ಮನಾಭ ರೈ, ರಾಜೇಶ್ ರೋಡ್ರಿಗಸ್, ಜಿ ಎ ಅಮಾನುಲ್ಲಾ, ಡಿ ಸಿ ಭಂಡಾರಿ, ಎನ್ ಅಬ್ದುಲ್ ಕರೀಂ ಬೊಳ್ಳಾಯಿ, ಬಾಲಕೃಷ್ಣ ಆಳ್ವ ಕೊಡಾಜೆ, ವೆಂಕಪ್ಪ ಪೂಜಾರಿ, ಜಗದೀಶ್ ಕೊಯಿಲ ಮೊದಲಾದವರು ಉಪಸ್ಥಿತರಿದ್ದರು.
0 comments:
Post a Comment