ಬಂಟ್ವಾಳ, ಎಪ್ರಿಲ್ 11, 2023 (ಕರಾವಳಿ ಟೈಮ್ಸ್) : ಈ ಬಾರಿಯ ವಿಧಾನಸಭಾ ಚುನಾವಣೆಯ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ ರಮಾನಾಥ ರೈ ಅವರ ಚುನಾವಣಾ ಕಚೇರಿಯ ಉದ್ಘಾಟನೆಯು ನಾಳೆ (ಎಪ್ರಿಲ್ 12 ಬುಧವಾರ) ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ.
ಬಿ ಸಿ ರೋಡಿನ ಪದ್ಮ ಪೆಟ್ರೋಲ್ ಬಂಕ್ ಮುಂಭಾಗದಲ್ಲಿರುವ ಧನಲಕ್ಷ್ಮಿ ಕಾಂಪ್ಲೆಕ್ಸಿನಲ್ಲಿ ನೂತನ ಕಚೇರಿ ಉದ್ಘಾಟನೆಯಾಗಲಿದೆ. ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ವಿವಿಧ ಸಮುದಾಯಗಳ ಹಿರಿಯ ಮುಖಂಡರು ಕಚೇರಿ ಉದ್ಘಾಟಿಸಲಿದ್ದಾರೆ. ಅಭ್ಯರ್ಥಿ ಬಿ ರಮಾನಾಥ ರೈ ಮತ್ತು ಪಕ್ಷದ ವರಿಷ್ಠರು, ಬ್ಲಾಕ್ ಮುಖಂಡರು, ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.
0 comments:
Post a Comment